Neer Dose Karnataka
Take a fresh look at your lifestyle.

ಜಸ್ಟ್ ೫ ನಿಮಿಷದಲ್ಲಿ ಹೀಗೆ ಮಾಡಿ ರಸಂ, ಮನೆಯವರೆಲ್ಲರೂ ಇಷ್ಟ ಪಡುತ್ತುವುದು ಖಚಿತ

ನಮಸ್ಕಾರ ಸ್ನೇಹಿತರೇ, ಇಂದು ನಾವು ಕೇವಲ 5 ನಿಮಿಷಗಳಲ್ಲಿ ಮಾಡಬಹುದಾದ ಟೊಮೇಟೊ ರಸಂ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಟೊಮೇಟೊ ರಸಂ ಮಾಡಲು ಬೇಕಾಗುವ ಪದಾರ್ಥಗಳು: ಸ್ವಲ್ಪ ಎಣ್ಣೆ, ಅರ್ಧ ಚಮಚ ಸಾಸಿವೆ, ಅರ್ಧ ಚಮಚ ಜೀರಿಗೆ, ಕಾಲು ಚಮಚ ಮೆಂತ್ಯ, ಸ್ವಲ್ಪ ಕರಿಬೇವು, ಚಿಟಿಕೆ ಇಂಗು, ಚಿಟಿಕೆ ಅರಿಶಿನಪುಡಿ, 1 ಟೊಮೇಟೊ, ರುಚಿಗೆ ತಕ್ಕಷ್ಟು ಉಪ್ಪು, ರುಚಿಗೆ ತಕ್ಕಷ್ಟು ಬೆಲ್ಲ, ಸ್ವಲ್ಪ ಹುಣಸೆ ಹಣ್ಣಿನ ರಸ, 1 ಚಮಚ ಸಾಂಬಾರ್ ಪುಡಿ ಅಥವಾ 1 ಚಮಚ ರಸಂ ಪೌಡರ್, ಸ್ವಲ್ಪ ಕೊತ್ತಂಬರಿ ಸೊಪ್ಪು.

ಟೊಮೇಟೊ ರಸಂ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ 1 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಅರ್ಧ ಚಮಚ ಸಾಸಿವೆ, ಅರ್ಧ ಚಮಚ ಜೀರಿಗೆ, ಕಾಲು ಚಮಚ ಮೆಂತ್ಯ, ಸ್ವಲ್ಪ ಕರಿಬೇವು, ಚಿಟಿಕೆ ಇಂಗು, ಚಿಟಿಕೆ ಅರಿಶಿನಪುಡಿಯನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಳ್ಳಿ.

ನಂತರ ಇದಕ್ಕೆ ಸಣ್ಣಗೆ ಹಚ್ಚಿದ ಟೊಮೇಟೊ ಹಾಗೂ ಸ್ವಲ್ಪ ಉಪ್ಪನ್ನು ಹಾಕಿ ಮಿಕ್ಸ್ ಮಾಡಿಕೊಂಡು ಟೊಮೇಟೊ ಬೇಯುವವರೆಗೂ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಸ್ವಲ್ಪ ಹುಣಸೆ ಹಣ್ಣಿನ ರಸ, ರುಚಿಗೆ ತಕ್ಕಷ್ಟು ಬೆಲ್ಲ ಹಾಕಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ 1 ಬಟ್ಟಲಿನಷ್ಟು ನೀರು ಹಾಗು ರುಚಿಗೆ ತಕಷ್ಟು ಉಪ್ಪನ್ನು ಹಾಕಿ ಕುದಿಯಲು ಬಿಡಿ. ನಂತರ ಇದಕ್ಕೆ 1 ಚಮಚದಷ್ಟು ಸಾಂಬಾರ್ ಪುಡಿ ಅಥವಾ ರಸಂ ಪುಡಿ ಹಾಗೂ ಕೊತ್ತಂಬರಿ ಸೊಪ್ಪನ್ನು ಹಾಕಿ ಅರ್ಧ ನಿಮಿಷಗಳ ಕಾಲ ಕುದಿಸಿಕೊಂಡರೆ ಟೊಮೇಟೊ ರಸಂ ಸವಿಯಲು ಸಿದ್ಧ.

Comments are closed.