Neer Dose Karnataka
Take a fresh look at your lifestyle.

ಕೆಲವೇ ಕೆಲವು ನಿಮಿಷಗಳಲ್ಲಿ ಪಾಲಕ್ ರೈಸ್ ಮಾಡುವುದು ಹೇಗೆ ಗೊತ್ತೇ?? ಕೇಳಿ ಕೇಳಿ ಮಾಡಿಸಿಕೊಳ್ಳುತ್ತಾರೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಪಾಲಕ್ ರೈಸ್ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಪಾಲಕ್ ರೈಸ್ ಮಾಡಲು ಬೇಕಾಗುವ ಸಾಮಗ್ರಿಗಳು: 2 ಬಟ್ಟಲು ಜೀರಾ ಅಕ್ಕಿ, 100ml ಎಣ್ಣೆ, 2 ಟೊಮೆಟೊ, 1 ಕಟ್ಟು ಪಾಲಕ್ ಸೊಪ್ಪು, 1 ಹೋಳು ತೆಂಗಿನಕಾಯಿ, 2 ಈರುಳ್ಳಿ, ಎರಡೂವರೆ ಚಮಚ ಶುಂಠಿ-ಬೆಳ್ಳುಳ್ಳಿ ಪೇಸ್ಟ್, 5 ಹಸಿಮೆಣಸಿನಕಾಯಿ, 1 ಚಮಚ ಧನಿಯಾ ಪುಡಿ, 1 ಚಮಚ ಅಚ್ಚ ಕಾರದ ಪುಡಿ, ಸ್ವಲ್ಪ ಕಸುರಿ ಮೇತಿ, 2 ಒಂದು ಇಂಚಿನ ಚಕ್ಕೆ, 4 -5 ಲವಂಗ,2 ಏಲಕ್ಕಿ, 2 ಚಮಚ ಮೊಸರು, 2 ಚಮಚ ತುಪ್ಪ, ರುಚಿಗೆ ತಕ್ಕಷ್ಟು ಉಪ್ಪು.

ಪಾಲಕ್ ರೈಸ್ ಮಾಡಲು ಬೇಕಾಗುವ ಸಾಮಗ್ರಿಗಳು: ಮೊದಲಿಗೆ ಪಾಲಕ್ ಸೊಪ್ಪನ್ನು ಬಿಡಿಸಿಕೊಂಡು ನೀರಿನಿಂದ 2 – 3 ಬಾರಿ ಚೆನ್ನಾಗಿ ತೊಳೆದುಕೊಳ್ಳಿ. ನಂತರ ಒಂದು ಪಾತ್ರೆಗೆ ಪಾಲಕ್ ಸೊಪ್ಪು ಹಾಗೂ ನೀರನ್ನು ಹಾಕಿ ಬೇಯಿಸಿಕೊಂಡು ತಣ್ಣಗಾಗಲು ಬಿಡಿ. ತಣ್ಣಗಾದ ನಂತರ ಒಂದು ಮಿಕ್ಸಿ ಜಾರಿಗೆ ಸೊಪ್ಪನ್ನು ಹಾಕಿ ಪೇಸ್ಟ್ ಮಾಡಿಕೊಂಡು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಒಂದು ಮಿಕ್ಸಿ ಜಾರಿಗೆ ತೆಗೆದುಕೊಂಡ ತೆಂಗಿನಕಾಯಿ ತುರಿಯನ್ನು ಹಾಕಿ ಪೇಸ್ಟ್ ಮಾಡಿಕೊಂಡು ಮತ್ತೊಂದು ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಒಂದು ದೊಡ್ಡ ಬಟ್ಟಲಿಗೆ ಅಕ್ಕಿ ಹಾಗೂ ನೀರನ್ನು ಹಾಕಿ 10 ನಿಮಿಷಗಳ ಕಾಲ ನೆನೆಯಲು ಬಿಡಿ.

ನಂತರ ಗ್ಯಾಸ್ ಮೇಲೆ ಒಂದು ಕುಕ್ಕರ್ ನನ್ನು ಇಟ್ಟುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಚಕ್ಕೆ, ಲವಂಗ, ಏಲಕ್ಕಿ, ಕಸೂರಿ ಮೇತಿಯನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಉದ್ದನೆ ಹಚ್ಚಿದ ಹಸಿಮೆಣಸಿನಕಾಯಿ ಹಾಗೂ ಶುಂಠಿ – ಬೆಳ್ಳುಳ್ಳಿ ಪೇಸ್ಟ್ ಅನ್ನು ಹಾಕಿ ಹಸಿವಾಸನೆ ಹೋಗುವವರೆಗೂ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಬ್ಬಿಕೊಂಡ ಪಾಲಕ್ ಪೇಸ್ಟ್ ಅನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಉದ್ದನೆ ಹಚ್ಚಿದ ಈರುಳ್ಳಿಯನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಸಣ್ಣಗೆ ಹಚ್ಚಿದ ಟೊಮೇಟೊ ಹಾಗೂ ರುಬ್ಬಿಕೊಂಡ ತೆಂಗಿನಕಾಯಿ ಪೇಸ್ಟ್ ಅನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಧನಿಯಾ ಪುಡಿ, ಅಚ್ಚಖಾರದ ಪುಡಿ, ಮೊಸರನ್ನು ಹಾಕಿ 2 ನಿಮಿಷಗಳ ಕಾಲ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ನೆನೆಸಿದ ಅಕ್ಕಿ ಹಾಗೂ ರುಚಿಗೆ ತಕಷ್ಟು ಉಪ್ಪನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಳ್ಳಿ. ನಂತರ ಇದಕ್ಕೆ ಒಂದೂವರೆ ಬಟ್ಟಲು ನೀರು ಹಾಗೂ ತುಪ್ಪವನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಂಡು ಮಿಚ್ಚಳವನ್ನು ಮುಚ್ಚಿ 2 ವಿಷಲ್ ಕೂಗಿಸಿಕೊಂಡರೆ ಪಾಲಕ್ ರೈಸ್ ಸವಿಯಲು ಸಿದ್ದ.

Comments are closed.