Neer Dose Karnataka
Take a fresh look at your lifestyle.

ಬಿಡುಗಡೆಯಾದ ಮೂರೇ ದಿನಕ್ಕೆ ಸಲಗವನ್ನು ಹಿಂದಿಕ್ಕಿದ ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ ಸಿನೆಮಾದ ಕಲೆಕ್ಷನ್ ಎಷ್ಟು ಗೊತ್ತೇ?

7

ನಮಸ್ಕಾರ ಸ್ನೇಹಿತರೇ ಇತ್ತೀಚಿಗಷ್ಟೇ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ನಟನೆಯ ಸಲಗ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ3 ಚಿತ್ರಗಳು ಬಿಡುಗಡೆಯಾಗಿ ಸಾಕಷ್ಟು ಯಶಸ್ಸನ್ನು ಕಂಡಿದ್ದವು. ನಿಮ್ಮ ಕನ್ನಡ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಕರೆತರಲು ಈ ಎರಡು ದೊಡ್ಡ ಚಿತ್ರಗಳು ಕಾರಣವಾಗಿದ್ದವು ಎಂದರೆ ತಪ್ಪಾಗಲಾರದು. ಇನ್ನು ಈಗ ಇತ್ತೀಚಿಗಷ್ಟೇ ಡಾಲಿ ಧನಂಜಯ್ ನಾಯಕನಾಗಿ ನಟಿಸಿರುವ ರತ್ನನ್ ಪ್ರಪಂಚ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ನಿಮಗೆಲ್ಲ ತಿಳಿದಿರುವಂತೆ ಕನ್ನಡ ಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಯೋಗಾತ್ಮಕ ಚಿತ್ರಗಳಲ್ಲಿ ತೊಡಗಿಕೊಂಡಿದೆ.

ಅವುಗಳಲ್ಲಿ ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ ಕೂಡ ಒಂದು ಎಂದು ಹೇಳಲು ಸಂತೋಷವಾಗುತ್ತದೆ. ಸದಾಕಾಲ ಮಾಸ್ ಪಾತ್ರಗಳಿಂದ ಎಲ್ಲರ ಮನ ಗೆಲ್ಲುತ್ತಿದ್ದ ಡಾಲಿ ಧನಂಜಯ್ ಮೊದಲಬಾರಿಗೆ ಫ್ಯಾಮಿಲಿ ಮ್ಯಾನ್ ಆಗಿ ಎಲ್ಲರ ಮನಗೆದ್ದಿದ್ದಾರೆ. ತಾಯಿ ಸೆಂಟಿಮೆಂಟ್ ಕುರಿತಂತೆ ಭಾವನಾತ್ಮಕವಾಗಿ ಖಾತೆಯನ್ನು ಕಟ್ಟಿಕೊಟ್ಟಿರುವ ರೋಹಿತ್ ಪದಕಿ ಯವರ ನಿರ್ದೇಶನವನ್ನು ಕೂಡ ಇಲ್ಲಿ ನಾವು ಮೆಚ್ಚಲೇ ಬೇಕಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ಮೆಚ್ಚುವ ಅಂಶವೆಂದರೆ ಇದನ್ನು ಸಿನಿಮಾ ತಂಡದವರಿಂದ ಹೆಚ್ಚಾಗಿ ಚಿತ್ರವನ್ನು ವೀಕ್ಷಿಸಿರುವ ಪ್ರೇಕ್ಷಕರ ಹೆಚ್ಚಾಗಿ ಪ್ರಮೋಷನ್ ಮಾಡುತ್ತಿದ್ದಾರೆ.

ರತ್ನನ್ ಪ್ರಪಂಚ ಚಿತ್ರವನ್ನು ಅಮೆಜಾನ್ ಪ್ರೈಮ್ ನಲ್ಲಿ ವೀಕ್ಷಿಸಿರುವ ಪ್ರತಿಯೊಬ್ಬ ಪ್ರೇಕ್ಷಕರು ಕೂಡ ಈ ಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು ಎಂಬ ಆಸೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಉಮಾಶ್ರೀ ಅವರು ಕೂಡ ತಾಯಿಯ ಪಾತ್ರದಲ್ಲಿ ಸಾಕಷ್ಟು ಮನೋಜ್ಞವಾಗಿ ನಟಿಸಿದ್ದಾರೆ. ಇನ್ನು ಡಾಲಿ ಧನಂಜಯ್ ನಟಿಸಿರುವ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಸಂಚಲನವನ್ನು ಮಾಡುತ್ತಿರುವ ರತ್ನನ್ ಪ್ರಪಂಚ ಚಿತ್ರ ಈಗಾಗಲೇ 15 ಕೋಟಿ ರೂಪಾಯಿಯನ್ನು ಗಳಿಸಿಕೊಂಡಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರೆ ಇನ್ನಷ್ಟು ಹೆಚ್ಚಾಗಿ ಹೇಳಿಕೆಯನ್ನು ಕಾಣುತಿತ್ತು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ರತ್ನನ್ ಪ್ರಪಂಚ ಚಿತ್ರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Leave A Reply

Your email address will not be published.