Neer Dose Karnataka
Take a fresh look at your lifestyle.

ಸಾರು ಮಾಡಲು ಸಮಯವಿಲ್ಲವೇ?? ದಿಡೀರ್ ಎಂದು ನಿಮಿಷಗಳಲ್ಲಿ ಮಾಡಿ ಮೊಸರು ಸಾರು ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಇಂದು ನಾವು ದಿಡೀರ್ ಮಾಡಬಹುದಾದ ಮೊಸರು ಸಾರು ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಮೊಸರು ಸಾರು ಮಾಡಲು ಬೇಕಾಗುವ ಪದಾರ್ಥಗಳು: 8 ಹಸಿಮೆಣಸಿನಕಾಯಿ, ಕಾಲು ಬಟ್ಟಲು ಕೊತ್ತಂಬರಿ ಸೊಪ್ಪು, ಅರ್ಧ ಬಟ್ಟಲು ತೆಂಗಿನಕಾಯಿ ತುರಿ, 1 ಚಮಚ ಜೀರಿಗೆ, ಕಾಲು ಬಟ್ಟಲು ಬೆಳ್ಳುಳ್ಳಿ, ಸ್ವಲ್ಪ ಕರಿಬೇವು, ಸ್ವಲ್ಪ ಸಾಸಿವೆ, 2 ಸಣ್ಣ ಈರುಳ್ಳಿ, ಸ್ವಲ್ಪ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು, ಅರ್ಧ ಲೀಟರ್ ಮೊಸರು.

ಮೊಸರು ಸಾರು ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ಎಣ್ಣೆ ಹಾಗೂ ಹಸಿಮೆಣಸಿನಕಾಯಿಯನ್ನು ಹಾಕಿ ಫ್ರೈ ಮಾಡಿಕೊಂಡು ಮಿಕ್ಸಿ ಜಾರಿಗೆ ಹಾಕಿಕೊಳ್ಳಿ. ನಂತರ ಮಿಕ್ಸಿ ಜಾರಿಗೆ ತೆಂಗಿನಕಾಯಿತುರಿ, 1 ಚಮಚ ಜೀರಿಗೆ, ಕಾಲು ಬಟ್ಟಲು ಬೆಳ್ಳುಳ್ಳಿ, ಸ್ವಲ್ಪ ಕೊತ್ತಂಬರಿ ಸೊಪ್ಪು, ಹಾಗೂ ಸ್ವಲ್ಪ ನೀರನ್ನು ಹಾಕಿಕೊಂಡು ನುಣ್ಣಗೆ ರುಬ್ಬಿಕೊಳ್ಳಿ. ನಂತರ ಗ್ಯಾಸ್ ಮೇಲೆ ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಹಾಕಿ ಕಾಯಲು ಬಿಡಿ.

ಎಣ್ಣೆ ಕಾದ ನಂತರ ಅದಕ್ಕೆ ಸಾಸಿವೆ, ಸಣ್ಣಗೆ ಹಚ್ಚಿದ ಮೆಣಸಿನಕಾಯಿ, ಸ್ವಲ್ಪ ಕರಿಬೇವು, ಉದ್ದನೆ ಹಚ್ಚಿದ ಈರುಳ್ಳಿ ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಬ್ಬಿದ ಮಸಾಲೆ ಹಾಗೂ ರುಚಿಗೆ ತಕಷ್ಟು ಉಪ್ಪು ಹಾಕಿಕೊಳ್ಳಿ. ಅವಶ್ಯಕತೆ ಇದ್ದರೆ ಸ್ವಲ್ಪ ನೀರನ್ನು ಸಹ ಸೇರಿಸಿಕೊಳ್ಳಬಹುದು. ನಂತರ 5 ನಿಮಿಷಗಳ ಕಾಲ ಕುದಿಸಿಕೊಂಡು ತಣ್ಣಗಾಗಲು ಬಿಡಿ. ತಣ್ಣಗಾದನಂತರ ಇದಕ್ಕೆ ಮೊಸರನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಕೊನೆಯದಾಗಿ ಸಣ್ಣಗೆ ಹಚ್ಚಿದ ಸ್ವಲ್ಪ ಈರುಳ್ಳಿ ಹಾಕಿ ಮಿಕ್ಸ್ ಮಾಡಿಕೊಂಡರೆ ಮೊಸರು ಸಾರು ಸವಿಯಲು ಸಿದ್ಧ.

Comments are closed.