ವಿರಾಟ್ ಕೊಹ್ಲಿ ರವರ ದಿಡೀರ್ ರಾಜೀನಾಮೆಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸೌರವ್ ಗಂಗೂಲಿ. ಹೇಳಿದ್ದೇನು ಗೊತ್ತೇ??
ನಮಸ್ಕಾರ ಸ್ನೇಹಿತರೇ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಬೇಸರವಾದ ಸುದ್ದಿ ಈಗಾಗಲೇ ಹರಿದಾಡುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಹೌದು ನಾವು ಮಾತನಾಡುತ್ತಿರುವುದು ವಿರಾಟ್ ಕೊಹ್ಲಿ ರವರು ಟೆಸ್ಟ್ ಕ್ರಿಕೆಟ್ ತಂಡದ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿರುವ ವಿಚಾರದ ಕುರಿತಂತೆ. ಕೆಲವು ಸಮಯಗಳ ಹಿಂದಷ್ಟೇ ಮೊದಲಿಗೆ t20 ನಾಯಕನ ಸ್ಥಾನದಿಂದ ವಿರಾಟ್ ಕೊಹ್ಲಿ ರವರು ಕೆಳಗಿಳಿದಿದ್ದರು. ನಂತರ ಆಯ್ಕೆ ಸಮಿತಿಯ ಸದಸ್ಯರು ಸೀಮಿತ ಓವರುಗಳ ತಂಡಕ್ಕೆ ಒಬ್ಬನೇ ನಾಯಕ ಇರಬೇಕೆಂಬುದು ಕಾರಣದಿಂದಾಗಿ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡುತ್ತಾರೆ.
ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ರವರಿಗೆ ಯಾವುದೇ ಬಿಸಿಸಿಐ ಸೂಚನೆ ನೀಡಿಲ್ಲ ಎಂಬ ವಿಚಾರ ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿತ್ತು. ಇದಾದ ನಂತರ ಈಗ ಸೌತ್ ಆಫ್ರಿಕಾ ಸರಣಿಯನ್ನು ಸೋತ ನಂತರ ವಿರಾಟ್ ಕೊಹ್ಲಿ ರವರು ಅಚಾನಕ್ಕಾಗಿ ಟೆಸ್ಟ್ ತಂಡದ ನಾಯಕನ ಸ್ಥಾನದಿಂದ ಕೂಡ ರಾಜೀನಾಮೆಯನ್ನು ಪಡೆದುಕೊಂಡಿದ್ದಾರೆ. ಇದು ಈಗಾಗಲೇ ಭಾರತೀಯ ಕ್ರಿಕೆಟ್ ತಂಡದ ಪ್ರೇಮಿಗಳಿಗೆ ದೊಡ್ಡಮಟ್ಟದ ದುಃಖವನ್ನು ತಂದುಕೊಟ್ಟಿದೆ. ವಿರಾಟ್ ಕೊಹ್ಲಿ ಅವರು ಈಗಾಗಲೇ 3 ಫಾರ್ಮೆಟ್ ನ ತಂಡಗಳ ನಾಯಕನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ತಂಡದಲ್ಲಿ ಇನ್ನು ಕೇವಲ ಬ್ಯಾಟ್ಸ್ಮನ್ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಇನ್ನು ಈ ಸಮಯದಲ್ಲಿ ವಿರಾಟ್ ಕೊಹ್ಲಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಆಗಿರುವ ಸೌರವ್ ಗಂಗೂಲಿ ಅವರು ಪ್ರತಿಕ್ರಿಯಿಸಿದ್ದಾರೆ. ಟೆಸ್ಟ್ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ವಿರಾಟ್ ಕೊಹ್ಲಿ ರವರ ವೈಯಕ್ತಿಕ ನಿರ್ಧಾರವಾಗಿರುತ್ತದೆ ಹಾಗೂ ಆ ನಿರ್ಧಾರವನ್ನು ಬಿಸಿಸಿಐ ಗೌರವಿಸುತ್ತದೆ. ವಿರಾಟ್ ಕೊಹ್ಲಿ ರವರ ನಾಯಕತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡ ಹಲವಾರು ಸಾಧನೆಗಳನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡದಲ್ಲಿ ವಿರಾಟ್ ಕೊಹ್ಲಿ ಪ್ರಮುಖ ಆಟಗಾರನಾಗಿ ತಂಡಕ್ಕೆ ಸಹಾಯ ಮಾಡಲಿದ್ದಾರೆ ಎಂಬುದಾಗಿ ಹೇಳಿಕೊಂಡಿದ್ದಾರೆ.
Comments are closed.