ಸಂಗೋಳ್ಳಿ ರಾಯಣ್ಣ ಸ್ಮರಣಾರ್ಥ ಮಿಲಿಟರಿ ಶಾಲೆ; ಇದು ಸಿಎಂ ಬಸವರಾಜ ಬೊಮ್ಮಾಯಿಯವರ ಹೇಳಿಕೆ. ಎಷ್ಟು ಕೋಟಿ ವೆಚ್ಚ ಗೊತ್ತೇ??
ನಮಸ್ಕಾರ ಸ್ನೇಹಿತರೇ, ರಾಜ್ಯದ ಮಾನ್ಯ ಮುಖ್ಯಮಂತ್ರಿಯವರು ಮಹತ್ವವಾದ ಘೋಷಣೆಯೊಂದನ್ನು ಮಾಡಿದ್ದು, ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ. ಇದು ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ವಿಷಯವಾಗಿದ್ದು, ರಾಜ್ಯದಲ್ಲಿ ಮಕ್ಕಳ ವಿದ್ಯಾಭ್ಯಾಸವನ್ನು ಇನ್ನಷ್ಟು ಉತ್ತಮಗೊಳಿಸುವಲ್ಲಿ ಸಹಾಯಕವಾಗಲಿದೆ.
ಹೌದು ಮನ್ಯ ಸಿಎಂ ಬಸವರಾಜ ಬೊಮ್ಮಾಯಿಯವರು. ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಮಿಲಿಟರಿ ಶಾಲೆ’ ಯೊಂದನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ಈ ಬೃಹತ್ ಶಾಲೆ ನಿರ್ಮಾಣಕ್ಕೆ 180 ಕೋಟಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ ಸ್ಮರಣೋತ್ಸವದಲ್ಲಿ ಮಾತನಾಡಿದ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಈಗಾಗಲೇ ಈ ವಿಷಯಕ್ಕಾಗಿ 55 ಕೋಟಿ ಹಣವನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಈ ವರ್ಷವೇ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ಮಹತ್ತರ ಮಾಹಿತಿಯನ್ನು ಹೊರಹಾಕಿದ್ದಾರೆ.
ಇನ್ನು ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿ ವಹಿಸಿಕೊಳ್ಳಲು ಮಾತುಕತೆ ನಡೆಸಲಾಗಿದೆ. ರಕ್ಷಣಾ ಇಲಾಖೆ ಇದನ್ನು ಮಿಲಿಟರಿ ಶಾಲೆಯಾಗಿ ವರಿವರ್ತನೆ ಮಾಡಲಿದೆ. ಸುಮಾರು 100 ಎಕರೆ ಪ್ರದೇಶದಲ್ಲಿ ಶಾಲೆಯನ್ನು ನಿರ್ಮಾಣ ಮಾಡಲಾಗುತ್ತಿದ್ದು, ಹಾಸ್ಟೆಲ್ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದಿದ್ದಾರೆ.
ಇದರ ಜೊತೆಗೆ ರಾಯಣ್ಣ ಹುತಾತ್ಮರಾದ ನಂದಗಡದಲ್ಲಿ ಅವರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನೂ ಕೂಡ ಪೂರ್ಣಗೊಳಿಸಲಾಗುವುದು, ಹಾಗೂ ಸಂಗೊಳ್ಳಿ ರಾಯಣ್ಣ ಅವರ ಹುಟ್ಟೂರಿನಲ್ಲಿ ರಾಕ್ ಗಾರ್ಡನ್ ನಿರ್ಮಾಣಕ್ಕೆ 10 ಎಕರೆ ಜಮೀನನ್ನೂ ಸರ್ಕಾರ ಮಂಜೂರು ಮಾಡಿದೆ. ರಾಯಣ್ಣ ಅವರ ಬಗ್ಗೆ ಮುಂದಿನ ಪೀಳಿಗೆಗೂ ತಿಳಿಸಿಕೊಡಲು ಈ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ಅವರ ದೇಶ ಭಕ್ತಿ, ಹೋರಾಟದ ಗುಣಗಳನ್ನು ಮಕ್ಕಳಿಗೂ ತಿಳಿಸಲು ಶಾಲಾ ಕಾಲೇಜುಗಳಲ್ಲಿ ಅವರ ಭಾವಚಿತ್ರವನ್ನು ಹಾಕುವಂತೆ ಆದೇಶ ಹೊರಡಿಸಲಾಗುವುದು. ಹಾಗೆಯೇ ಅವರ ಸ್ವಾಮಿ ನಿಷ್ಠೆ, ಧೈರ್ಯವನ್ನು ನಮ್ಮ ಆಡಳಿತದಲ್ಲೂ ಅಳವಡಿಸಿಕೊಳ್ಳಲಾಗುವುದು ಎಂದ ಮಾನ್ಯ ಬೊಮ್ಮಾಯಿಯವರು, ಕರ್ನಾಟಕದಲ್ಲಿ ಹೋರಾಟಗಾರರ ಇತಿಹಾಸವೇ ಇದೆ. ಹಾಗಾಗಿ ಬೆಂಗಳೂರಿನ ರಸ್ತೆಗಳಿಗೆ ಹೋರಾಟಗಾರರ ಹೆಸರನ್ನಿಡುವುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.
ನಮದೆಹಲಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಇದೆ. ಅದೇ ರೀತಿ ರಾಯಣ್ಣನ ಮೂರ್ತಿ ಸ್ಥಾಪನೆಗೂ ಕೂಡ ಸಂಬಂಧಪಟ್ಟವರಿಗೆ ಪತ್ರ ಬರೆಯಲಾಗಿದೆ ಎಂಬ ವಿಚಾರವನ್ನೂ ತಿಳಿಸಿದ್ದಾರೆ. ಇದರ ಜೊತೆಗೆ ಬೆಳಗಾವಿಯಲ್ಲಿ ರಾಯಣ್ಣ ಅವರ ಮೂರ್ತಿಯನ್ನು ಹಾನಿ ಮಾಡಲಾಗಿತ್ತು. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದ ಎದುರು ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಶೀರ್ಘದಲ್ಲೇ ನಿರ್ಮಾಣ ಮಾಡುವುದಾಗಿಯೂ ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Comments are closed.