ಕಿಂಗ್ ಕೊಹ್ಲಿ ರವರ ಧಾಖಲೆಯನ್ನು ಕುಟ್ಟಿ ಪುಡಿ ಪುಡಿ ಮಾಡಿದ ಶ್ರೇಯಸ್ ಐಯ್ಯರ್, ಹೊಸ ಕಿಂಗ್ ಬಂದಾಯಿತೇ??
ನಮಸ್ಕಾರ ಸ್ನೇಹಿತರೇ ಭಾರತೀಯ ಕ್ರಿಕೆಟ್ ತಂಡ ಇತ್ತೀಚಿನ ದಿನಗಳಲ್ಲಿ ರೋಹಿತ್ ಶರ್ಮ ರವರ ನಾಯಕತ್ವದಲ್ಲಿ ಅಸಾಧಾರಣ ಪ್ರದರ್ಶನವನ್ನು ನೀಡುತ್ತಿದೆ ಎಂದರೆ ತಪ್ಪಾಗಲಾರದು. ಅದರಲ್ಲೂ ಈಗ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಸರಣಿಯ ಪಂದ್ಯಾಟಗಳನ್ನು ಗಮನಿಸಿದರು ಕೂಡ ನಿಮಗೆ ಪಲಿತಾಂಶ ಎದುರಿಗೆ ಇದೆ. ಅದರಲ್ಲೂ ಶ್ರೀಲಂಕಾ ವಿರುದ್ಧದ ಟಿ-20 ಸರಣಿಗೆ ಕಿಂಗ್ ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಅವರ ಸ್ಥಾನವನ್ನು ಶ್ರೇಯಸ್ ಅಯ್ಯರ್ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.
ಸಮರ್ಥವಾಗಿ ಅವರ ಸ್ಥಾನವನ್ನು ನಿಭಾಯಿಸುತ್ತಿದ್ದಾರೆ ಎಂದು ಹೇಳುವುದಕ್ಕಿಂತ ಹೆಚ್ಚಾಗಿ ತಂಡಕ್ಕೆ ಗೆಲುವಿನ ರೂವಾರಿ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಮ್ಯಾಚ್ ವಿನ್ನರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ ರವರ ದಾಖಲೆಯನ್ನು ಕೂಡ ಪುಡಿ ಗಟ್ಟಿದ್ದಾರೆ. ಸಿಕ್ಕಂತಹ ಅವಕಾಶವನ್ನು ಎರಡು ಕೈಯಿಂದ ಬಾಚಿಕೊಂಡು ತಂಡದ ಗೆಲುವಿಗೆ ಮಾತ್ರವಲ್ಲದೆ ತನ್ನ ದಾಖಲೆ ಕಿರೀಟಕ್ಕೆ ಇನ್ನೊಂದು ಗರಿಯನ್ನು ಸೇರಿಸಿಕೊಂಡಿದ್ದಾರೆ. ನಿಮಗೆ ತಿಳಿದಿರುವಂತೆ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ರವರು 57 74 ಹಾಗೂ 73 ರನ್ ಗಳನ್ನು ಸಿ’ಡಿಸಿದ್ದಾರೆ.
ಹಾಗಿದ್ದರೆ ವಿರಾಟ್ ಕೊಹ್ಲಿ ರವರ ಯಾವ ದಾಖಲೆಯನ್ನು ಶ್ರೇಯಸ್ ಅಯ್ಯರ್ ರವರು ಮುರಿದಿದ್ದಾರೆ ಅನ್ನುವುದನ್ನು ತಿಳಿಯೋಣ ಬನ್ನಿ. ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ಇದುವರೆಗೂ ಅತ್ಯಂತ ಹೆಚ್ಚು ರನ್ ಗಳಿಸಿರುವ ದಾಖಲೆ ವಿರಾಟ್ ಕೊಹ್ಲಿ ರವರ ಹೆಸರಿನಲ್ಲಿತ್ತು. ಹೌದು 2015-16 ರಲ್ಲಿ ನಡೆದಂತಹ ಆಸ್ಟ್ರೇಲಿಯಾ ವಿರುದ್ಧದ 3 ಟಿ20 ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ರವರು 199 ರನ್ ಗಳನ್ನು ಬಾರಿಸಿದ್ದರು. ಆದರೆ ಈಗ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಶ್ರೇಯಸ್ ಅಯ್ಯರ್ ರವರು 204 ರನ್ನುಗಳನ್ನು ಬಾರಿಸುವ ಮೂಲಕ ವಿರಾಟ್ ಕೊಹ್ಲಿ ರವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕೂಡ ವಿರಾಟ್ ಕೊಹ್ಲಿ ರವರೇ ಇದ್ದು 183 ರನ್ ಬಾರಿಸಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಕೆಎಲ್ ರಾಹುಲ್ 164 ರನ್ ಹಾಗೂ ಐದನೇ ಸ್ಥಾನದಲ್ಲಿ ರೋಹಿತ್ ಶರ್ಮಾ ರವರು 162 ರನ್ ಗಳನ್ನು ಬಾರಿಸಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Comments are closed.