ಅಪ್ಪು ಅಭಿಮಾನಿಗಳಿಗೆ ಶಾಕ್, ಬಿಡುಗಡೆಗೂ ಮುನ್ನವೇ ಜೇಮ್ಸ್ ದಾಖಲೆಯನ್ನು ಕುಟ್ಟಿ ಪುಡಿ ಪುಡಿ ಮಾಡಲು ಮುಂದಾದ ಕೆಜಿಎಫ್-2. ಏನು ಗೊತ್ತೇ??
ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಕೊನೆಯ ಚಿತ್ರವಾಗಿರುವ ಜೇಮ್ಸ್ ಚಿತ್ರ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ದಾಖಲೆಯನ್ನು ನಿರ್ಮಿಸಿದೆ. ಈಗಾಗಲೇ ಬಾಕ್ಸಾಫೀಸ್ ನಲ್ಲಿ ದಾಖಲೆಯ 127 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಅನ್ನು ಕೇವಲ ಆರು ದಿನಗಳಲ್ಲಿ ಪೂರೈಸಿದೆ. ನಿಜಕ್ಕೂ ಕೂಡ ಕನ್ನಡ ಚಿತ್ರರಂಗದಲ್ಲಿ 88 ವರ್ಷಗಳ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮಟ್ಟದ ಗಳಿಸಿಕೊಂಡಿದ್ದು ಇದೇ ಮೊದಲು ಎಂದು ಹೇಳಬಹುದಾಗಿದೆ.
ಕಲೆಕ್ಷನ್ನಲ್ಲಿ ಇದುವರೆಗೂ ಅತ್ಯಂತ ಹೆಚ್ಚು ಕಲೆಕ್ಷನ್ ಮಾಡಿರುವ ಕನ್ನಡದ ಚಿತ್ರವೆಂದರೆ ಅದು ಕೆಜಿಎಫ್ ಚಾಪ್ಟರ್ 1 ಆಗಿತ್ತು. ಈಗ ಇರುವಂತಹ ಎಲ್ಲಾ ದಾಖಲೆಗಳನ್ನು ಜೇಮ್ಸ್ ಚಿತ್ರ ತನ್ನ ಹೆಸರಿಗೆ ಬರೆದುಕೊಂಡಿದೆ. ಆದರೆ ಈಗ ಇದೇ ಏಪ್ರಿಲ್ 14ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿ ನಿಂತಿರುವ ರಾಕಿಂಗ್ ಸ್ಟಾರ್ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಕೆಜಿಎಫ್ ಚಾಪ್ಟರ್ 2 ಚಿತ್ರ ಜೇಮ್ಸ್ ಚಿತ್ರದ ಮೊದಲ ದಾಖಲೆಯನ್ನು ಈಗ ಬಿಡುಗಡೆಗೆ ಮುನ್ನವೇ ಮುರಿದಿದೆ. ಹಾಗಿದ್ದರೆ ಜೇಮ್ಸ್ ಚಿತ್ರದ ಯಾವ ದಾಖಲೆಯನ್ನು ಕೆಜಿಎಫ್ ಚಾಪ್ಟರ್ 2 ಚಿತ್ರ ಬಿಡುಗಡೆಗೂ ಮುನ್ನವೇ ಮುರಿದಿದೆ ಎಂಬುದನ್ನು ತಿಳಿಯೋಣ ಬನ್ನಿ.
ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಜೇಮ್ಸ್ ಚಿತ್ರ ನಾಲ್ಕು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ವಿಶ್ವಾದ್ಯಂತ ಮೊದಲ ದಿನ ಬಿಡುಗಡೆಯಾಗಿತ್ತು. ಇದು ಕನ್ನಡ ಚಿತ್ರರಂಗದ ಮಟ್ಟಿಗೆ ದೊಡ್ಡ ದಾಖಲೆಯಾಗಿತ್ತು. ಆದರೆ ಈಗ ಕೆಜಿಎಫ್ ಚಾಪ್ಟರ್ 2 ಆರು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನುವುದಾಗಿ ನಿರ್ಮಾಪಕ ವಿಜಯ್ ಕಿರಗಂದೂರು ರವರು ಹೇಳಿದ್ದಾರೆ. ಹೀಗಾಗಿ ಬಿಡುಗಡೆಗೂ ಮುನ್ನವೇ ಕೆಜಿಎಫ್ ಚಾಪ್ಟರ್ 2 ಚಿತ್ರ ಜೇಮ್ಸ್ ಚಿತ್ರದ ದಾಖಲೆಯನ್ನು ಮುರಿದಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ಚಿತ್ರಮಂದಿರಗಳ ಸಂಖ್ಯೆ ಹೆಚ್ಚಾದರೂ ಕೂಡ ಆಗಬಹುದು. ಒಟ್ಟಾರೆಯಾಗಿ ಕನ್ನಡಚಿತ್ರರಂಗ ಇತ್ತೀಚಿನ ದಿನಗಳಲ್ಲಿ ಗಣನೀಯ ಬೆಳವಣಿಗೆ ಕಾಣುತ್ತಿರುವುದು ಸಂತೋಷದಾಯಕ ವಿಚಾರ.
Comments are closed.