ಬಿಗ್ ನ್ಯೂಸ್: ಎಲ್ಲಾ ನಟರ ದಾಖಲೆ ಕುಟ್ಟಿ ಪುಡಿ ಪುಡಿ ಮಾಡುವಂತಹ ಸಂಭಾವನೆ ಪಡೆಯಲು ಸಿದ್ದವಾದ ಯಶ್, ದಿಲ್ ರಾಜು ಕೊಡುತ್ತಿರುವುದು ಎಷ್ಟು ಕೋಟಿ ಗೊತ್ತೇ?
ಕೆಜಿಎಫ್ ಚಾಪ್ಟರ್1 ಮತ್ತು ಕೆಜಿಎಫ್ ಚಾಪ್ಟರ್2 ಸಿನಿಮಾ ಇಂದ ಯಶ್ ಅವರ ಜನಪ್ರಿಯತೆ ಎಷ್ಟರ ಮಟ್ಟಿಗೆ ಇದೆ ಎಂದು ಎಲ್ಲರೂ ನೋಡಿದ್ದೇವೆ. ನಮ್ಮ ಕನ್ನಡ ನಟನೊಬ್ಬನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಸಿಗುತ್ತಿರುವುದು ನಿಜಕ್ಕೂ ಸಂತೋಷದ ವಿಚಾರ. ಕೆಜಿಎಫ್ ಚಾಪ್ಟರ್2 ಬಳಿಕ ಯಶ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಎಲ್ಲರಲ್ಲು ಇತ್ತು. ನರ್ತನ್ ಅವರ ಜೊತೆಗೆ ಮುಂದಿನ ಸಿನಿಮಾ ಮಾಡುತ್ತಾರೆ ಎನ್ನಲಾಗಿದ್ದು, ಕೆ.ವಿ.ಎನ್ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡಲಿದೆ.. ಆ ಸಿನಿಮಾ ಬಳಿಕ ಯಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ತೆಲುಗು ನಿರ್ದೇಶನ ಜೊತೆಗೆ ಮಾಡುತ್ತಾರೆ ಎನ್ನುವ ಮಾಹಿತಿ ಸಿಕ್ಕಿದೆ.
ಸಧ್ಯಕ್ಕೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಯಶ್ ಅವರ ಜೊತೆಗೆ ಸಿನಿಮಾ ನಿರ್ಮಾಣ ಮಾಡಲು ಟಾಲಿವುಡ್ ನ ಖ್ಯಾತ ನಿರ್ಮಾಪಕ ದಿಲ್ ರಾಜು ಅವರು ರೆಡಿ ಇದ್ದಾರೆ ಎನ್ನಲಾಗುತ್ತಿದೆ. ದಿಲ್ ರಾಜು ಅವರು ಈಗಾಗಲೇ ಯಶ್ ಅವರಿಗೆ 100 ಕೋಟಿ ಸಂಭಾವನೆ ನೀಡುವುದಾಗಿ ಮಾತು ಕತೆ ನಡೆಸಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದುಬಂದಿದೆ. ಇನ್ನು ಯಶ್ ಅವರ ಕಡೆಯಿಂದ ಇದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನು ಲಭ್ಯವಾಗಿಲ್ಲ. ಅಂದಹಾಗೆ ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿರುತ್ತದೆ ಎನ್ನುವ ಮಾಹಿತಿ ಸಿಕ್ಕಿದೆ. ತೆಲುಗು ನಿರ್ದೇಶಕರೇ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರಂತೆ. ಯಾಕೆಂದರೆ ಕೆಜಿಎಫ್ ಬಳಿಕ ಯಶ್ ಅವರ ಅಭಿಮಾನಿ ಬಳಗ ದೊಡ್ಡದಾಗಿದ್ದು, ಅವರ ಸಿನಿಮಾಗಳ ಮೇಲೆ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಇದೆ.
ಯಶ್ ಅವರ ಜೊತೆಗಿನ ಸಿನಿಮಾವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡಲು ಯೋಜನೆ ಹಾಕಿದ್ದಾರಂತೆ ದಿಲ್ ರಾಜು ಅವರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುವ ಪ್ಲಾನ್ ನಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಆದರೆ ಈ ವಿಚಾರದ ಬಗ್ಗೆ ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ. ದಿಲ್ ರಾಜ್ ಅವರು ಹಲವು ಸಿನಿಮಾಗಳನ್ನು ಈಗ ನಿರ್ಮಾಣ ಮಾಡುತ್ತಿದ್ದಾರೆ. ಪ್ರಸ್ತುತ ಅವರು ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಅವರೊಡನೆ ಸಿನಿಮಾ ಮಾಡುತ್ತಿದ್ದು, ತಮಿಳು ಮತ್ತು ತೆಲುಗಿನಲ್ಲಿ ಆ ಸಿನಿಮಾ ತಯಾರಾಗುತ್ತಿದೆ. ಈ ಪ್ರಾಜೆಕ್ಟ್ ಮುಗಿದ ಬಳಿಕ ನಡುವೆಯೇ ಯಶ್ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡುತ್ತಾರೆ ಎನ್ನುವ ವಿಚಾರ ಜೋರಾಗಿಯೇ ಚರ್ಚೆಯಾಗುತ್ತಿದೆ. ಇದು ನಿಜವೋ ಸುಳ್ಳೋ ಎಂದು ತಿಳಿಯಲು ಅಧಿಕೃತ ಮಾಹಿತಿಗಾಗಿ ಕಾಯಬೇಕಿದೆ.
Comments are closed.