ಯಶ್ ಗಾಗಿ ಓಡೋಡಿ ಬಂದಿರುವ ತಮಿಳು ನಿರ್ದೇಶಕ ಶಂಕರ್, ಈ ಸಿನೆಮಾದ ಬಜೆಟ್ ಕೇಳಿ ದೇಶವೇ ಶಾಕ್. ಯಾಕೆ ಗೊತ್ತೇ?
ಕೆಜಿಎಫ್ ಚಾಪ್ಟರ್1 ಮತ್ತು ಕೆಜಿಎಫ್ ಚಾಪ್ಟರ್2 ಸಿನಿಮಾ ಇಂದ ಯಶ್ ಅವರ ಜನಪ್ರಿಯತೆ ಎಷ್ಟರ ಮಟ್ಟಿಗೆ ಇದೆ ಎಂದು ಎಲ್ಲರೂ ನೋಡಿದ್ದೇವೆ. ನಮ್ಮ ಕನ್ನಡ ನಟನೊಬ್ಬನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಸಿಗುತ್ತಿರುವುದು ನಿಜಕ್ಕೂ ಸಂತೋಷದ ವಿಚಾರ. ಕೆಜಿಎಫ್ ಚಾಪ್ಟರ್2 ಬಳಿಕ ಯಶ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಎಲ್ಲರಲ್ಲು ಇತ್ತು. ನರ್ತನ್ ಅವರ ಜೊತೆಗೆ ಮುಂದಿನ ಸಿನಿಮಾ ಮಾಡುತ್ತಾರೆ ಎನ್ನಲಾಗಿದ್ದು, ಕೆ.ವಿ.ಎನ್ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡಲಿದೆ.. ಆ ಸಿನಿಮಾ ಬಳಿಕ ಯಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ತೆಲುಗು ನಿರ್ಮಾಣ ಸಂಸ್ಥೆಯ ಜೊತೆಗೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು.
ತೆಲುಗು ಚಿತ್ರರಂಗದ ಖ್ಯಾತ ಪ್ರೊಡ್ಯೂಸರ್ ದಿಲ್ ರಾಜು ಅವರು ಯಶ್ ಅವರಿಗೆ 100 ಕೋಟಿ ರೂಪಾಯಿ ಸಂಭಾವನೆ ನೀಡಿ, ತೆಲುಗು ಮತ್ತು ಕನ್ನಡ ದ್ವಿಭಾಷಾ ಸಿನಿಮಾ ನಿರ್ಮಾಣ ಮಾಡುತ್ತಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ಬೇರೆಯದೇ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ, ಯಶ ಅವರ ಅಭಿಮಾನಿಗಳು ಥ್ರಿಲ್ ಆಗಿರುವುದಂತೂ ಖಂಡಿತ. ಯಶ್ ಅವರ ಮುಂದಿನ ಸಿನಿಮಾವನ್ನು ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಅವರು ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿದೆ. ಈ ಸಿನಿಮಾದ ಬಜೆಟ್ ಬರೋಬ್ಬರಿ 800 ಕೋಟಿ ರೂಪಾಯಿ ಎನ್ನಲಾಗುತ್ತಿದೆ.
ಯಶ್ ಅವರಿಗೆ ಶಂಕರ್ ಅವರ ಜೊತೆಗೆ ಸಿನಿಮಾ ಮಾಡಬೇಕು ಎಂದು ಆಸೆ ಇತ್ತು. ಶಂಕರ್ ಅವರ ಸಿನಿಮಾಗಳು ಇಷ್ಟ ಎಂದು ಸಂದರ್ಶನ ಒಂದರಲ್ಲಿ ಸಹ ಹೇಳಿಕೊಂಡಿದ್ದರು ನಟ ಯಶ್. ಆದರೆ ಯಶ್ ಅವರ ಈ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನು ಸಿಕ್ಕಿಲ್ಲ. ಒಟ್ಟಿನಲ್ಲಿ ಅಭಿಮಾನಿಗಳು ಮಾತ್ರ ಈ ಸುದ್ದಿ ನಿಜವೇ ಇರಬಹುದು ಎಂದು ಸಂಭ್ರಮ ಪಡುತ್ತಿದ್ದಾರೆ. ಯಶ್ ಅವರ ಹೊಸ ಸಿನಿಮಾ ಯಾವುದು ಎನ್ನುವ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಒಟ್ಟಿನಲ್ಲಿ ಯಶ್ ಅವರು ಮತ್ತೊಂದು ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಾರೆ ಎನ್ನುವ ವಿಚಾರ ಮಾತ್ರ ಜೋರಾಗಿಯೇ ಸದ್ದು ಮಾಡುತ್ತಿದೆ.
Comments are closed.