Neer Dose Karnataka
Take a fresh look at your lifestyle.

ಈ ತರಕಾರಿಯ ಲಾಭಗಳ ಬಗ್ಗೆ ತಿಳಿದರೆ ನಿಜಕ್ಕೂ ಶಾಕ್ ಆಗ್ತೀರಾ. ಇಂದೇ ಹೋಗಿ ಹುಡುಕಿಕೊಂಡು ತಂದು ತಿಂತಿರಾ. ತಿಂದರೆ ಏನಾಗುತ್ತದೆ ಗೊತ್ತೇ??

ನಮ್ಮ ಪೂರ್ವಿಕರು ತೊಂಡೆಕಾಯಿಯನ್ನು ಹೆಚ್ಚಾಗಿ ಬಳಸುತ್ತಿದ್ದರು. ಇದರ ಜೊತೆಗೆ ಸೊಪ್ಪು, ಕರಿಬೇವು, ಬೇಳೆ ಹಾಕಿ ಅಡುಗೆ ಮಾಡುತ್ತಿದ್ದರು. ಇದನ್ನು ಹೊಲಗಳಲ್ಲಿ ಬೆಳೆಯುತ್ತಾರೆ. ತೊಂಡೆಕಾಯಿ ಬೀಜಗಳು ಸ್ವಲ್ಪ ಸಿಹಿ ರುಚಿ ಹೊಂದಿರುತ್ತದೆ, ತೊಂಡೆಕಾಯಿ ಬೀಜಗಳಲ್ಲಿ ಪೋಷಕಾಂಶಗಳು ಹೆಚ್ಚಾಗಿರುತ್ತದೆ. ಇವುಗಳಲ್ಲಿ ನೀರಿನ ಅಂಶ ಹೆಚ್ಚು, ವಿಟಮಿನ್ ಸಿ, ವಿಟಮಿನ್ ಎ, ಫೋಲಿಕ್ ಆಸಿಡ್, ಕ್ಯಾಲ್ಸಿಯಂ, ಕಬ್ಬಿಣ, ಫೈಬರ್, ಮತ್ತು ಆಂಟಿ ಆಕ್ಸಿಡಂಟ್ ಅಂಶಗಳು ಹೆಚ್ಚಾಗಿರುತ್ತದೆ. ದೇಹದ ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿ ಫೈಬರ್ ಅಂಶ ಇರುವ ಕಾರಣ, ಹೊಟ್ಟೆ ತುಂಬಿದ ಹಾಗೆ ಇರುತ್ತದೆ. ಹೆಚ್ಚು ತಿನ್ನುವ ಬಯಕೆಯನ್ನು ಕಡಿಮೆ ಮಾಡುತ್ತದೆ.

ಇದು ಆಂಟಿ ಆಕ್ಸಿಡೆಂಟ್‌ ಅಂಶ ಸಮೃದ್ಧವಾಗಿದೆ, ಹಾಗಾಗಿ ಇದು ಫ್ರೀ ರಾಡಿಕಲ್‌ ಗಳನ್ನು ನಾಶಪಡಿಸುತ್ತದೆ. ಅಲ್ಲದೆ ದೇಹದಲ್ಲಿ ಜೀವಕೋಶಗಳ ಬೆಳವಣಿಗೆ ಮತ್ತು ದುರಸ್ತಿಯನ್ನು ಉತ್ತೇಜನ ನೀಡುತ್ತದೆ, ರಕ್ತವನ್ನು ಶುದ್ಧಗೊಳಿಸುತ್ತದೆ. ವಿವಿಧ ಸೋಂಕುಗಳು ಮತ್ತು ರೋಗಗಳಿಂದ ರಕ್ಷಣೆ ನೀಡಲು ಸಹಾಯ ಮಾಡುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಉತ್ಕರ್ಷಣ ನಿರೋಧಕಗಳು ಜಾಸ್ತಿ ಇರುವುದರಿಂದ ಮುಖದ ಮೇಲಿನ ಸುಕ್ಕುಗಳು ಮತ್ತು ಕಲೆಗಳನ್ನು ಕಡಿಮೆ ಮಾಡುತ್ತದೆ. ತೊಂಡೆಕಾಯಿ ಬೀಜಗಳಲ್ಲಿ ಹೆಚ್ಚಿನ ನೀರಿನ ಅಂಶವಿದೆ. ಇದರಿಂದ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು.

ಈ ಹಣ್ಣುಗಳನ್ನು ತಿನ್ನುವುದರಿಂದ ರಕ್ತ ಒತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ. ಇದು ಹೃದಯವನ್ನು ಆರೋಗ್ಯವಾಗಿ ಇರಿಸುತ್ತದೆ. ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಹಾಗು ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಡೈಯಾಬಿಟಿಸ್ ಇರುವವರಲ್ಲಿ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ. ನಾರಿನ ಅಂಶ ಹೆಚ್ಚಿರುವುದರಿಂದ ಗ್ಯಾಸ್ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ. ಅಲ್ಲದೆ, ಈ ತೊಂಡೆಕಾಯಿ ಜಾಂಡೀಸ್ ಚಿಕಿತ್ಸೆಯಲ್ಲಿ ತುಂಬಾ ಉಪಯುಕ್ತವಾಗಿದೆ. ಈ ತೊಂಡೆಕಾಯಿ ಬೀಜಗಳನ್ನು ತಿನ್ನುವುದರಿಂದ ವಯಸ್ಸಾದ ಚಿಹ್ನೆಗಳನ್ನು ಕಡಿಮೆ ಮಾಡುತ್ತಿದೆ.

Comments are closed.