Neer Dose Karnataka
Take a fresh look at your lifestyle.

Kannada News: ಸುಮ್ಮನೆ ಇರಲಾರದೆ ರಮ್ಯಾ ಷಾಕಿಂಗ್ ಹೇಳಿಕೆ: ಫ್ಯಾನ್ಸ್ ವಾರ್ ಬಗ್ಗೆ ಹೇಳಿದ್ದೇನು ಗೊತ್ತೇ??

Kannada News: ನಟ ದರ್ಶನ್ ಅವರ ಮೇಲೆ ಹೊಸಪೇಟೆಯಲ್ಲಿ ಚಪ್ಪಲಿ ಎಸೆದ ಘಟನೆ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಒಳಗಾಗುತ್ತಿದೆ. ಕಲಾವಿದರು ಮತ್ತು ಅವರ ಅಭಿಮಾನಿಗಳ ಬಗ್ಗೆ ಅನೇಕ ಮಾತುಗಳು ಕೇಳಿ ಬರುತ್ತಿದೆ. ಈ ಘಟನೆ ಬಗ್ಗೆ ಚಂದನವನದ ಕಲಾವಿದರು ಸಹ ಪ್ರತಿಕ್ರಿಯೆ ನೀಡುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ಕ್ವೀನ್ ಎನ್ನಿಸಿಕೊಂಡಿರುವ ನಟಿ ರಮ್ಯಾ ಅವರು ಈ ವಿಚಾರದ ಬಗ್ಗೆ ಒಂದು ಪತ್ರ ಬರೆದಿದ್ದಾರೆ. ಕಲಾವಿದರು ಮತ್ತು ಅವರ ಅಭಿಮಾನಿಗಳು ಹೇಗಿರಬೇಕು, ಹಾಗೆಯೇ ಮೊದಲೆಲ್ಲಾ ಅಭಿಮಾನಿ ಬಳಗ ಹೇಗಿತ್ತು, ಈಗ ಹೇಗಿದೆ ಎನ್ನುವುದನ್ನು ವಿವರಿಸಿದ್ದಾರೆ.

“ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ, ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್ ಗಳು ಮುಂತಾದ ಪ್ರತಿಯೊಬ್ಬ ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಉನ್ನತ ಸ್ಥಾನಕ್ಕೆ ಬಂದಿರುತ್ತಾರೆ. ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ, ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ ಏರಿದ್ದರೆ ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೆ ಇರಬಹುದು. ಚಿತ್ರರಂಗದಲ್ಲಿ ತಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಹಿನ್ನೆಲೆಗಳು ಬೇರೆಯೇ ಇರಬಹುದು. ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದುಕಷ್ಟವಾಗಿದ್ದರೆ ಹಲವರಿಗೆ ಮೈ ತುಂಬಾಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತ ಬಂದಿರಬಹುದು ಹಲವರು ಇದ್ದುದ್ದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಿಟ್ಟು ಬಂದದ್ದು ಉಂಟು. ಇದನ್ನು ಓದಿ..Biggboss Kannada: ಎಲ್ಲರ ಲೆಕ್ಕಾಚಾರ ಬದಲಿಸಿದ ಬಿಗ್ ಬಾಸ್ ಸ್ಪರ್ದಿ: ಈ ಬಾರಿ ಬಿಗ್ ಬಾಸ್ ಗೆಲ್ಲೋದು ಇವರೇ ಅಂತ ನೋಡಿ. ರೂಪೇಶ್ ರಾಜಣ್ಣ, ರೂಪೇಶ್ ಶೆಟ್ಟಿ ನು ಅಲ್ಲ, ಮತ್ಯಾರು ಗೊತ್ತೇ?

ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ ಅಷ್ಟೇ ಆದರೆ ಶ್ರಮ ಪಟ್ಟವರ ಸಂಖ್ಯೆ ಎಣಿಸಲಸಾಧ್ಯ. ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟ ಪಟ್ಟು ಶ್ರದ್ಧೆಯಿಂದ ಕೆಲಸ ಮಾಡಲು ಹಂಬಲ ಇರುವ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ನಡವಳಿಕೆ. ನಾನು ಯಾವತ್ತಿಗೂ ನಂಬರ್ ೧ ಮತ್ತು ಈ ಸ್ಥಾನ ನನಗೆ ಮಾತ್ರ ದಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆಬಹಳ ಚಿಂತಾಜನಕವಾಗಿದೆ .ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗ್ತಿದೆ

ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ. ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳವಳಿಕೆ ಹೇಳಿ ಅವರನ್ನು ಸುಸಂಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು. ಕನ್ನಡ ಚಿತ್ರರಂಗ ಇವತ್ತು ದೇಶ ವಿದೇಶಗಳಲ್ಲಿ ದೊಡ್ಡ ಖ್ಯಾತಿಪಡೆದಿದೆ. ಇದನ್ನು ಓದಿ..Kannada News: ನಾನೇ ಎಲ್ಲಾ ಎಂದು ಮೆರೆಯುತ್ತಿದ್ದ ರಶ್ಮಿಕಾಗೆ ಶಾಕ್ ಕೊಟ್ಟ ಪುಷ್ಪ 2 ತಂಡ: ಪತನ ಆರಂಭನಾ??

IMDB ಉನ್ನತ ೧೦ ಚಿತ್ರಗಳ ಪಟ್ಟಿಯಲ್ಲಿ ೩ ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ. ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಪೂರ್ತಿ ಬೇಕಿದೆಯೇ? ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಆಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ. ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ. ಎಲ್ಲರಿಗು ಒಳಿತಾಗಲಿ …”

ಎಂದು ನಟಿ ರಮ್ಯಾ ಅವರು ಪತ್ರದಲ್ಲಿ ಬರೆದುಕೊಂಡಿದ್ದಾರೆ. ಆದರೆ ಈ ಪತ್ರಕ್ಕೆ ಅಭಿಮಾನಿಗಳು ನೀಡುತ್ತಿರುವ ಪ್ರತಿಕ್ರಿಯೆ ಬೇರೆಯೇ ಆಗಿದೆ. ನೆಟ್ಟಿಗರು ಮತ್ತು ಅಭಿಮಾನಿಗಳು ರಮ್ಯಾ ಅವರ ಈ ಹೇಳಿಕೆಗೆ ಅಸಮಾಧಾನಗೊಂಡಿದ್ದಾರೆ. ಎಲ್ಲಾ ನಟರ ಅಭಿಮಾನಿಗಳು ಇದೇ ರೀತಿ ಎಂದು ಹೇಳುವುದು ತಪ್ಪು, ಸಾಕಷ್ಟು ನಟರ ಫ್ಯಾನ್ಸ್ ಸಂಘ ಕಟ್ಟಿಕೊಂಡು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಅವರನ್ನೆಲ್ಲ ಇದಕ್ಕೆ ಕರೆದು ತರಬಾರದು. ಮೊದಲು ಎಲ್ಲದರ ಬಗ್ಗೆ ತಿಳಿದುಕೊಂಡು ಮಾತನಾಡಬೇಕು. ಸುಮ್ಮನೆ ಎಲ್ಲರನ್ನು ಒಂದೇ ಗುಂಪಿಗೆ ಹಾಕಬಾರದು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇದನ್ನು ಓದಿ..Kannada News: 2023 ರ ಪ್ಲಾನ್ ಬುಕ್ ಬಿಡುಗಡೆ ಗೊಳಿಸಿದ ಸಚಿನ್ ಪುತ್ರಿ. ಈ ಬುಕ್ ಬೆಲೆ ಕೇಳಿದರೆ, ಕೊಳ್ಳುವುದೇ ಬೇಡ ಅಂತೀರಾ. ಎಷ್ಟು ಗೊತ್ತೇ?

Comments are closed.