BJP vs Congress: ಸಿದ್ದು ರವರು ನಿಜಕ್ಕೂ ಎಷ್ಟು ಹಣ ನಿಮ್ಮ ಖಾತೆಗೆ ಹಾಕಬೇಕು ಗೊತ್ತೇ? ಬಿಜೆಪಿ ಹೊಸ ವರಸೆಯಲ್ಲಿ ಡಿಮ್ಯಾಂಡ್ ಮಾಡಿದ್ದು ಏನು ಗೊತ್ತೇ?
BJP vs Congress: ರಾಜ್ಯದಲ್ಲಿ ಈಗ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಒಂದಲ್ಲಾ ಒಂದು ಕಷ್ಟಗಳು ಬರುತ್ತಲೇ ಇದೆ. ಸಿದ್ದರಾಮಯ್ಯ ಅವರು 5 ಗ್ಯಾರಂಟಿ ಸರಿಯಾದ ರೀತಿಯಲ್ಲಿ ಜಾರಿಗೆ ತರಲು ಪ್ರಯತ್ನಪಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಬಿಪಿಎಲ್ ಎಪಿಎಲ್ ಕಾರ್ಡ್ ನಲ್ಲಿ ಹೆಸರು ಇರುವ ಪ್ರತಿಯೊಬ್ಬ ವ್ಯಕ್ತಿಗು ತಿಂಗಳಿಗೆ 10 ಕೆಜಿ ಕೊಡುವುದಾಗಿ ಸರ್ಕಾರ ಹೇಳಿತ್ತು. ನಂತರ ಕೇಂದ್ರದಿಂದ ಅಕ್ಕಿ ಕೊಡುತ್ತಿಲ್ಲ ಬೇರೆ ರಾಜ್ಯದ ಸಂಪರ್ಕ ಮಾಡುತ್ತಿದ್ದೇವೆ ಎಂದು ಹೇಳಲಾಯಿತು.
ಬಳಿಕ ಅಕ್ಕಿ ಸಿಗುತ್ತಿಲ್ಲ, 5 ಕೆಜಿ ಅಕ್ಕಿ ಕೊಟ್ಟು ಇನ್ನು 5 ಕೆಜಿ ಅಕ್ಕಿಯ ಹಣವನ್ನು ಜನರ ಬ್ಯಾಂಕ್ ಅಕೌಂಟ್ ಗೆ ಹಾಕುವುದಾಗಿ ಸಿದ್ದರಾಮಯ್ಯನವರ ಸರ್ಕಾರ ಹೇಳಿತು. ಈ ರೀತಿ ಮಾತು ಬದಲಾಯಿಸಿ, ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಇರುವುದಕ್ಕೆ ಬಿಜೆಪಿ ಸರ್ಕಾರ ಕಾಂಗ್ರೆಸ್ ಸರ್ಕಾರವನ್ನು (BJP vs Congress) ತರಾಟೆಗೆ ತೆಗೆದುಕೊಂಡಿದೆ. ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರಿಗೆ ಪ್ರಶ್ನೆ ಮಾಡಿದೆ.. ಇದನ್ನು ಓದಿ..Shakti Yojane: ಶಕ್ತಿ ಯೋಜನೆಯ ಶಕ್ತಿ ಬಹಿರಂಗ- ಮಹಿಳೆಯರಿಗೆ ಉಚಿತ ಬಸ್ ನೀಡಿದ್ದಕೆ ಇದುವರೆಗೂ ಖರ್ಚಾದದ್ದು ಎಷ್ಟು ಕೋಟಿ ಗೊತ್ತೇ? ಸಾರಿಗೆ ಬೊಕ್ಕಸ ಉಡೀಸ್.
“ಅಕ್ಕಿಯನ್ನು ಹೊಂದಿಸಲು “ಕೈ”ಲಾಗದ ಮುಖ್ಯಮಂತ್ರಿಗಳು, ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ, “ಕೈ” ತೊಳೆದುಕೊಳ್ಳುತ್ತಿದ್ದಾರೆ. ನರೇಂದ್ರ ಮೋದಿರವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯ ರವರ #ATMSarkara ಕ್ಕೆ ಇಷ್ಟು ದಿನ ಬೇಕಾಯಿತು..” ಎಂದು ಟ್ವೀಟ್ ಮಾಡಲಾಗಿದೆ.
“ಸ್ವಾಮಿ ಸ್ವಯಂಘೋಷಿತ ಆರ್ಥಿಕ ತಜ್ಞ, ಸಿದ್ದರಾಮಯ್ಯ ರವರೇ, ರಾಜ್ಯದ ಎಲ್ಲಾ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುತ್ತೇವೆಂದು, ನೀವುಗಳೇ ಹೋದಲ್ಲಿ, ಬಂದಲ್ಲಿ ಭಾಷಣ ಮಾಡುತ್ತಿದ್ದಿರಿ. ಈಗಾಗಲೇ ಕೇಂದ್ರ ಸರ್ಕಾರದ ವತಿಯಿಂದ 5 ಕೆಜಿ ದೊರೆಯುತ್ತಿದೆ ಎಂದರೇ, ನಿಮ್ಮ ಮಾತಿನ ಪ್ರಕಾರ, ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ 5 ಹಾಗೂ ರಾಜ್ಯ ಸರ್ಕಾರದ ವತಿಯಿಂದ 10, ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು..” ಎಂದು ಹೇಳಿದೆ ಬಿಜೆಪಿ (BJP vs Congress) . ಇದನ್ನು ಓದಿ..RBI New Rules: ಮತ್ತೊಂದು ಕಠಿಣ ನಿರ್ಧಾರ ತೆಗೆದುಕೊಂಡ RBI- ಇನ್ನು ಮುಂದೆ ಮಾದ್ಯಮವರ್ಗದವರಿಗೆ ಬಿಗ್ ಶಾಕ್.
“ಆದರೇ ಈಗ ರಾಜ್ಯ ಸರ್ಕಾರದ ವತಿಯಿಂದ ಕೇವಲ 5 ಕೆಜಿ ಅಕ್ಕಿಯ ಬದಲಿಗೆ, ಪ್ರತಿ ಕೆಜಿಗೆ 34 ರೂಪಾಯಿ ನೀಡುವುದಾಗಿ ಘೋಷಿಸಿದ್ದೀರಿ. ಹಾಗಾದರೆ ಬಾಕಿ 5 ಕೆಜಿ ಅಕ್ಕಿಯ ಕಥೆ ಏನು?
5 ಕೆಜಿಯ ಬಾಬ್ತು + 5ಕೆಜಿ ಕೇಂದ್ರ ನೀಡುವ ಉಚಿತ ಅಕ್ಕಿ = 15 ಕೆಜಿ ಎಂದು ಜನರಿಗೆ ವಂಚಿಸುತ್ತಿದ್ದಿರಿ. ಜನರನ್ನು ನಂಬಿಸಿ ಮೋಸ ಮಾಡುವುದು, ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ..” ಎಂದು ಟ್ವೀಟ್ ಮಾಡಿದೆ (BJP vs Congress) . ಇದನ್ನು ಓದಿ..Prime day: ಕಂಡು ಕೇಳರಿಯದ ರೀತಿಯಲ್ಲಿ 80 % ವರೆಗೂ ಡಿಸ್ಕೌಂಟ್ ಘೋಷಣೆ ಮಾಡುತ್ತಿರುವ ಅಮೆಜಾನ್- ಪ್ರೈಮ್ ಡೇ ನ ಸಂಪೂರ್ಣ ಡೀಟೇಲ್ಸ್.
“ನಿಮ್ಮ ಅಸಮರ್ಥ ಹಾಗೂ ಉಡಾಫೆ ಶೈಲಿಯ ಆಡಳಿತಕ್ಕೆ ಎಲ್ಲಿಯೂ ಸಹ ಅಕ್ಕಿ ದೊರೆತಿಲ್ಲ. ಈ ಕಾರಣಕ್ಕಾಗಿ ಜನತೆಗೆ ಅಕ್ಕಿ ಬದಲು ಹಣ ನೀಡಿ ಎಂದಾಗ, ಹಣವನ್ನು ತಿನ್ನುವುದಕ್ಕೆ ಆಗುತ್ತಾ ಎಂದು ಉದ್ಧಟತನ ಪ್ರದರ್ಶಿಸಿದ್ದಿರಿ, ಈಗ ಕೆಜಿಗೆ 34 ರೂಪಾಯಿ ಎಂದು Uಟರ್ನ್ ಹೊಡೆದಿದ್ದೀರಿ. ಕೇಂದ್ರದ ಸಬ್ಸಿಡಿ ಇಲ್ಲದೇ, ತಾವು ನಿಗದಿಪಡಿಸಿರುವ ಮೊತ್ತಕ್ಕೆ ಊಟಕ್ಕೆ ಯೋಗ್ಯವಾದ ಅಕ್ಕಿ ಕರ್ನಾಟಕದ ಯಾವ ಗಿರಣಿಯಲ್ಲಿ ಸಿಗುತ್ತದೆ ಎಂಬ ಮಾಹಿತಿಯನ್ನೂ ಸ್ವಲ್ಪ ಜನತೆಗೆ ತಿಳಿಸಿ. ಇಲ್ಲವಾದಲ್ಲಿ ಮಾರುಕಟ್ಟೆಯಲ್ಲಿ ಯಾವ ದರದಲ್ಲಿ ಯೋಗ್ಯ ಅಕ್ಕಿ ದೊರೆಯುತ್ತದೆಯೋ, ಅದೇ ದರವನ್ನು ನೀವು ಜನತೆಗೆ ನೀಡಬೇಕು..” ಎಂದು ಬಿಜೆಪಿ (BJP vs Congress) ಕಿಡಿಕಾರಿದೆ.
“13 ಬಜೆಟ್ ಮಂಡಿಸಿದ್ದೇನೆ, ಆಡಳಿತದಲ್ಲಿ ಅಪಾರವಾದ ಅನುಭವವಿದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನಿಮಗೆ, ಎಫ್‌ಸಿಐಯನ್ನು ಸರ್ಕಾರ ಏಕೆ ಸ್ಥಾಪಿಸಿದೆ, ಅದರ ಧ್ಯೇಯೋದ್ದೇಶಗಳೇನು ಎಂಬುದು ತಿಳಿದಿಲ್ಲವಾದದ್ದು ಅತ್ಯಂತ ದುರದೃಷ್ಟಕರ. ನಿಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ವಿನಾಕಾರಣ ದೂಷಿಸುವ ನಿಮ್ಮ ಬುದ್ಧಿಗೆ, ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ..” ಎಂದಿದೆ ಬಿಜೆಪಿ (BJP vs Congress) .
Comments are closed.