ಹೊಸ ರೀತಿಯಲ್ಲಿ ಟೊಮೊಟೊ ಕಾಯಿ ಚಟ್ನಿ ಹೀಗೆ ಮಾಡಿ ನೋಡಿ, ರುಚಿಯಂತೂ ಅದ್ಭುತ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಟೊಮೊಟೊ ಕಾಯಿ ಚಟ್ನಿ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಟೊಮೊಟೊ ಕಾಯಿ ಚಟ್ನಿ ಮಾಡಲು ಬೇಕಾಗುವ ಪದಾರ್ಥಗಳು: 5 -6 ಟೊಮೇಟೊ ಕಾಯಿ, 1 ಈರುಳ್ಳಿ, 1 ಗಡ್ಡೆ ಬೆಳ್ಳುಳ್ಳಿ, 1 ಇಂಚು ಹಸಿಶುಂಠಿ, 8 -10 ಹಸಿಮೆಣಸಿನ ಕಾಯಿ, 1 ಚಮಚ ಜೀರಿಗೆ, 2 ಚಮಚ ಕಡಲೆ ಬೀಜ, ಸ್ವಲ್ಪ ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು, ಸ್ವಲ್ಪ ಬೆಲ್ಲ, ಸ್ವಲ್ಪ ಕರಿಬೇವು.

ನಂತರ ಇದಕ್ಕೆ ಸಣ್ಣನೆ ಹಚ್ಚಿದ ಶುಂಠಿ ಹಾಗೂ ಬೆಳ್ಳುಳ್ಳಿಯನ್ನು ಹಾಕಿ ಮತ್ತೆ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಹಸಿಮೆಣಸಿನಕಾಯಿಯನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಜೀರಿಗೆ ಹಾಕಿ ಮತ್ತೆ ಫ್ರೈ ಮಾಡಿಕೊಂಡು ಒಂದು ಪ್ಲೇಟಿಗೆ ಹಾಕಿ ತಣ್ಣಗಾಗಲು ಬಿಡಿ. ನಂತರ ಮತ್ತೆ ಅದೇ ಬಾಣಲಿಗೆ 1 ಚಮಚದಷ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಇದಕ್ಕೆ ಹಚ್ಚಿಕೊಂಡ ಟೊಮೊಟೊಕಾಯಿಯನ್ನು ಹಾಕಿ ಕಂದು ಬಣ್ಣ ಬರುವವರೆಗೂ ಫ್ರೈ ಮಾಡಿಕೊಂಡು ಒಂದು ಬಟ್ಟಲಿಗೆ ಹಾಕಿ ತಣ್ಣಗಾಗಲು ಬಿಡಿ. ಈ ಎಲ್ಲಾ ಪದಾರ್ಥಗಳು ತಣ್ಣಗಾದ ನಂತರ ಒಂದು ಮಿಕ್ಸಿ ಜಾರಿಗೆ ಹಾಕಿಕೊಳ್ಳಿ. ನಂತರ ಮಿಕ್ಸಿ ಜಾರಿಗೆ ಬೆಲ್ಲ, ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ರುಬ್ಬಿಕೊಂಡರೆ ಟೊಮೊಟೊ ಕಾಯಿ ಚಟ್ನಿ ಸವಿಯಲು ಸಿದ್ಧ.