ಹೋಟೆಲ್ ಶೈಲಿಯಲ್ಲಿ ಜೀರಾ ರೈಸ್ ಮನೆಯಲ್ಲಿಯೇ ಮಾಡುವುದು ಹೇಗೆ ಗೊತ್ತೇ?? ಎಲ್ಲರೂ ಕೇಳಿ ಕೇಳಿ ಹಾಕಿಸಿಕೊಳ್ತಾರೆ.

ನಮಸ್ಕಾರ ಸ್ನೇಹಿತರೇ, ಇಂದು ನಾವು ಹೋಟೆಲ್ ಶೈಲಿಯಲ್ಲಿ ಜೀರಾ ರೈಸ್ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಈ ರೆಸಿಪಿಯನ್ನು ಮಾಡಲು ಹೆಚ್ಚಿನ ಪದಾರ್ಥಗಳ ಅವಶ್ಯಕತೆ ಇಲ್ಲ. ಮನೆಯಲ್ಲಿರುವ ಪದಾರ್ಥಗಳನ್ನು ಬಳಸಿ ಜೀರಾ ರೈಸ್ ಮಾಡಬಹುದು. ಹೋಟೆಲ್ ಶೈಲಿಯಲ್ಲಿ ಜೀರಾ ರೈಸ್ ಮಾಡುವ ಮಾಡಲು ಬೇಕಾಗುವ ಪದಾರ್ಥಗಳು:
2 ಲೋಟ ಜೀರಾ ರೈಸ್, 2 ಈರುಳ್ಳಿ, 50ml ತುಪ್ಪ, 15 – 20 ಗೋಡಂಬಿ, 8 – 10 ಹಸಿಮೆಣಸಿನಕಾಯಿ, 1 ಚಮಚ ಜೀರಿಗೆ, 1 ಚಮಚ ವೈಟ್ ಪೇಪರ್ ಪೌಡರ್, 1 ಚಮಚ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ಮತ್ತೊಂದು ಕಡೆ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ತುಪ್ಪವನ್ನು ಹಾಕಿ ಕಾಯಲು ಬಿಡಿ. ತುಪ್ಪ ಕಾದ ನಂತರ ಗೋಡಂಬಿಯನ್ನು ಹಾಕಿ ಫ್ರೈ ಮಾಡಿಕೊಂಡು ಒಂದು ಬಟ್ಟಲಿಗೆ ಹಾಕಿಕೊಳ್ಳಿ. ನಂತರ ಅದೇ ಬಾಣಲೆಗೆ ಜೀರಿಗೆ, ಉದ್ದನೆ ಹಚ್ಚಿದ ಹಸಿಮೆಣಸಿನಕಾಯಿಯನ್ನು ಹಾಕಿ 30 ಸೆಕೆಂಡುಗಳ ಕಾಲ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ರುಚಿಗೆ ತಕಷ್ಟು ಉಪ್ಪು ಹಾಗೂ ಸಣ್ಣಗೆ ಹಚ್ಚಿದ ಈರುಳ್ಳಿಯನ್ನು ಹಾಕಿ 4 – 5 ನಿಮಿಷಗಳ ಕಾಲ ಫ್ರೈ ಮಾಡಿಕೊಂಡು ಗ್ಯಾಸ್ ಆಫ್ ಮಾಡಿಕೊಳ್ಳಿ. ಕೊನೆಯದಾಗಿ ಇದಕ್ಕೆ ಮಾಡಿಕೊಂಡ ಅನ್ನ, ವೈಟ್ ಪೆಪ್ಪರ್ ಪೌಡರ್ ಹಾಗೂ ಫ್ರೈ ಮಾಡಿಕೊಂಡ ಗೋಡಂಬಿಯನ್ನು ಹಾಕಿ ಮಿಕ್ಸ್ ಮಾಡಿಕೊಂಡರೆ ಹೋಟೆಲ್ ಶೈಲಿಯಲ್ಲಿ ಜೀರಾ ರೈಸ್ ಸವಿಯಲು ಸಿದ್ದ.