ಜೀವದಲ್ಲಿಯೇ ನೋಡಿರದ ರುಚಿಯ ಶಾವಿಗೆ ಬಾತ್ ಮನೆಯಲ್ಲಿಯೇ ಮಾಡುವುದು ಹೇಗೆ ಗೊತ್ತೇ??

ನಮಸ್ಕಾರ ಸ್ನೇಹಿತರೇ, ಇಂದು ನಾವು ಹೋಟೆಲ್ ಶೈಲಿಯಲ್ಲಿ ಶಾವಿಗೆ ಬಾತ್ ಮಾಡುವ ವಿಧಾನವನ್ನು ನಿಮಗೆ ತಿಳಿಸಲಾಗಿದೆ. ಹೋಟೆಲ್ ಶೈಲಿಯಲ್ಲಿ ಶಾವಿಗೆ ಬಾತ್ ಮಾಡಲು ಬೇಕಾಗುವ ಪದಾರ್ಥಗಳು: 200 ಗ್ರಾಂ ಶಾವಿಗೆ, 1 ಈರುಳ್ಳಿ, 2 ಚಮಚ ತೆಂಗಿನ ಕಾಯಿ ತುರಿ, 2 ಚಮಚ ಕಡ್ಲೇಬೀಜ, 1 ಚಮಚ ಕಡಲೆ ಬೇಳೆ, 1 ಚಮಚ ಉದ್ದಿನಬೇಳೆ, 1 ಚಮಚ ನಿಂಬೆ ಹಣ್ಣಿನ ರಸ, 7 – 8 ಗೋಡಂಬಿ, 2ಚಮಚ ತುಪ್ಪ, ಸ್ವಲ್ಪ ಅರಿಶಿನ ಪುಡಿ, ಸ್ವಲ್ಪ ಶುಂಠಿ, ಸ್ವಲ್ಪ ಕೊತ್ತಂಬರಿ ಸೊಪ್ಪು, 3 – 4 ಹಸಿಮೆಣಸಿನಕಾಯಿ, 3 ಚಮಚ ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.

ಹೋಟೆಲ್ ಶೈಲಿಯಲ್ಲಿ ಶಾವಿಗೆ ಬಾತ್ ಮಾಡುವ ವಿಧಾನ: ಮೊದಲಿಗೆ ಗ್ಯಾಸ್ ಮೇಲೆ ಒಂದು ಪಾತ್ರೆಯನ್ನು ಇಟ್ಟುಕೊಂಡು ಅದಕ್ಕೆ ನೀರನ್ನು ಹಾಕಿ ಕಾಯಲು ಬಿಡಿ. ನೀರು ಕಾದ ನಂತರ ಸ್ವಲ್ಪ ಎಣ್ಣೆಯನ್ನು ಹಾಕಿ ನೀರು ಸ್ವಲ್ಪ ಬಿಸಿಯಾಗಲು ಬಿಡಿ. ನಂತರ ಇದಕ್ಕೆ ಶಾವಿಗೆಯನ್ನು ಹಾಕಿ ಒಂದು ಬಾರಿ ಮಿಕ್ಸ್ ಮಾಡಿಕೊಂಡು 2 – 3 ನಿಮಿಷಗಳ ಕಾಲ ಬೇಯಿಸಿಕೊಂಡು ಶಾವಿಗೆಯನ್ನು ನೀರಿನಿಂದ ಬೇರ್ಪಡಿಸಿಕೊಳ್ಳಿ.

ನಂತರ ಗ್ಯಾಸ್ ಮೇಲೆ ಒಂದು ಬಾಣಲೆಯನ್ನು ಇಟ್ಟುಕೊಂಡು ಅದಕ್ಕೆ ಎಣ್ಣೆಯನ್ನು ಹಾಕಿ ಕಾಯಲು ಬಿಡಿ. ಎಣ್ಣೆ ಕಾದ ನಂತರ ಸಾಸಿವೆ, ಕಡಲೆಬೇಳೆ, ಉದ್ದಿನಬೇಳೆ, ತುರಿದ ಶುಂಠಿ, ಸಣ್ಣಗೆ ಹಚ್ಚಿದ ಹಸಿಮೆಣಸಿನಕಾಯಿ, ಕರಿಬೇವನ್ನು ಹಾಕಿ ಫ್ರೈ ಮಾಡಿಕೊಳ್ಳಿ. ನಂತರ ಇದಕ್ಕೆ ಅರಿಶಿನಪುಡಿ, ರುಚಿಗೆ ತಕಷ್ಟು ಉಪ್ಪು, ಸಣ್ಣಗೆ ಹಚ್ಚಿದ ಈರುಳ್ಳಿಯನ್ನು ಹಾಕಿ 3 – 4 ನಿಮಿಷಗಳ ಕಾಲ ಫ್ರೈ ಮಾಡಿಕೊಳ್ಳಿ.