ಕೆಜಿಎಫ್ ಪ್ರಶಾಂತ್ ನೀಲ್ ತೆಲುಗಿನ ಜೂನಿಯರ್ ಎನ್ ಟಿ ಆರ್ ರವರ ಸಿನಿಮಾಗಾಗಿ ಪಡೆದ ಸಂಭಾವನೆ ಎಷ್ಟು ಗೊತ್ತಾ??

ನಮಸ್ಕಾರ ಸ್ನೇಹಿತರೇ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಸ್ಟಾರ್ ನಟರು ಹಲವಾರು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಇದೀಗ ಗಲ್ಲಾಪೆಟ್ಟಿಗೆಯಲ್ಲಿ ತಮ್ಮ ಚಿತ್ರಗಳ ಮೂಲಕ ಮಾಡುತ್ತಿದ್ದಾರೆ. ಹೌದು ಸ್ಟಾರ್ ಎಂದರು ಇದೀಗ ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದು ಭಾರತಾದ್ಯಂತ ಹೊಸ ಅಲೆಯನ್ನು ಸೃಷ್ಟಿಸುತ್ತಿದ್ದಾರೆ. ಇನ್ನು ಇಂತಹ ನಟರಲ್ಲಿ ಜೂನಿಯರ್ ಎನ್ ಟಿ ಆರ್ ಕೂಡ ಒಬ್ಬರು.

ಹೌದು ತೆಲುಗು ಚಿತ್ರರಂಗದಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚಿನ ಚಿತ್ರಗಳಲ್ಲಿ ನಟಿಸಿದ ಇವರು ಇದೀಗ ತಮ್ಮ 31ನೇ ಚಿತ್ರಕ್ಕಾಗಿ ರೆಡಿಯಾಗಿದ್ದಾರೆ. ಇನ್ನೂ ಇವರ 31ನೇ ಚಿತ್ರವನ್ನು ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ನಿರ್ದೇಶಿಸಲಿದ್ದಾರೆ. ಇನ್ನು ಈ ಚಿತ್ರಕ್ಕಾಗಿ ಪ್ರಶಾಂತ್ ಅವರು ಪಡೆದುಕೊಂಡ ಸಂಭಾವನೆ ಎಷ್ಟು ಎಂಬುದರ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿ ತಿಳಿಸಿ ಕೊಡುತ್ತೇವೆ ಬನ್ನಿ.

ಹೌದು ಕೆಜಿಎಫ್ ಅಂತಹ ಬಿಗ್ ಬಜೆಟ್ ಸಿನಿಮಾವನ್ನು ನಿರ್ದೇಶಿಸಿದ ಪ್ರಶಾಂತ್ ನೀಲ್ ಅವರು ಇದೀಗ ಭಾರತಾದ್ಯಂತ ಹೆಸರಾಂತ ನಿರ್ದೇಶಕರಲ್ಲಿ ಒಬ್ಬರಾಗಿ ಜನಪ್ರಿಯತೆ ಪಡೆದಿದ್ದಾರೆ. ಇನ್ನೂ ಅವರು ಕೆಜಿಎಫ್ ಮೊದಲ ಭಾಗದ ನಂತರ ಕೆಜಿಎಫ್ 2 ಸಿನಿಮಾದಲ್ಲಿ ನಿರತರಾಗಿದ್ದರು. ಇದೀಗ ಆ ಸಿನಿಮಾದ ಚಿತ್ರೀಕರಣ ಕೂಡ ಸಂಪೂರ್ಣವಾಗಿ ಮುಗಿದಿದ್ದು, ಪ್ರಭಾಸ್ ಅಭಿನಯದ ಸಲ ಎಂಬ ಚಿತ್ರದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ದೊಡ್ಡ ದೊಡ್ಡ ಸ್ಟಾರ್ ನಟರೊಂದಿಗೆ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ ನೀಲ್ ಅವರು ಇದೀಗ ಫೇಮಸ್ ನಿರ್ದೇಶಕರು.

ಇದೀಗ ಪ್ರಶಾಂತ್ ನೀಲ್ ಅವರು ದಕ್ಷಿಣ ಭಾರತದ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ಅವರ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಇನ್ನು ಇದರ ಬಗ್ಗೆ ಪ್ರಶಾಂತ್ ಅವರು ಅಧಿಕೃತವಾಗಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಇನ್ನು ಪ್ರಶಾಂತ್ ನೀಲ್ ಹಾಗೂ ಎನ್ ಟಿ ಆರ್ ಕಾಂಬಿನೇಷನ್ನಲ್ಲಿ ಹೊಸ ಚಿತ್ರವೊಂದು ತಯಾರಾಗಲಿದೆ. ಇನ್ನು ಈ ಚಿತ್ರದ ಸುದ್ದಿ ಹೊರಬೀಳುತ್ತಿದ್ದಂತೆ ಈ ಚಿತ್ರದ ನಾಯಕಿ ಯಾರು? ಕಥೆ ಹೇಗಿದೆ? ನಿರ್ದೇಶಕರ ಸಂಭಾವನೆ ಎಷ್ಟು? ಎಂಬ ಹತ್ತು ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡುತ್ತಿವೆ.

ಆದರೆ ಇದ್ಯಾವುದರ ಬಗ್ಗೆ ಅಧಿಕೃತವಾದ ಮಾಹಿತಿ ತಿಳಿದುಬಂದಿಲ್ಲ. ಆದರೆ ಎನ್ ಟಿ ಆರ್ ಅವರ 31ನೇ ಚಿತ್ರಕ್ಕೆ ಪ್ರಶಾಂತ್ ನೀಲ್ ಅವರು ನಿರ್ದೇಶಕರಾಗಿದ್ದು ಖಚಿತ. ಇದೀಗ ಭಾರತಾದ್ಯಂತ ರಾಜಮೌಳಿ, ಸುಕುಮಾರ್, ತ್ರಿವಿಕ್ರಮ್ ಶ್ರೀನಿವಾಸ್ ಸೇರಿದಂತೆ ಸಾಕಷ್ಟು ನಿರ್ದೇಶಕರು ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕರಾಗಿದ್ದಾರೆ. ಇದೀಗ ಪ್ರಶಾಂತ ನೀಲ್ ಅವರು ಜೂನಿಯರ್ ಎನ್ ಟಿ ಆರ್ ಅವರೊಂದಿಗೆ ಸಿನಿಮಾದಲ್ಲಿ ತೊಡಗಿದ್ದು, ಈ ಚಿತ್ರವನ್ನು ನಿರ್ದೇಶಿಸಲು ಪ್ರಶಾಂತ್ ಅವರು ಸುಮಾರು 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.

ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಾಂತ್ ನೀಲ್ ಅವರು ಪ್ರಭಾಸ್ ಅಭಿನಯದ ಸಲಾರ್ ಚಿತ್ರದ ನಿರ್ದೇಶನಕ್ಕಾಗಿ 20 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದೆಲ್ಲಾ ಅಭಿಮಾನಿಗಳು ಹೊರಡಿಸಿದ ವದಂತಿಯಾಗಿ. ಟಾಲಿವುಡ್ ಮೂಲಗಳ ಪ್ರಕಾರ ಪ್ರಶಾಂತ್ ನೀಲ್ ಅವರು ಇದೀಗ ಜೂನಿಯರ್ ಎನ್ ಟಿ ಆರ್ ಅಭಿನಯದ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಇನ್ನು ಈ ಸುದ್ದಿ ನಿಮಗೆ ಇಷ್ಟವಾದಲ್ಲಿ ಶೇರ್ ಮಾಡಿ ಹಾಗೂ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಮೆಂಟ್ ಮಾಡಿ ತಿಳಿಸಿ.