ಅವರು ಇವರು ಅಲ್ಲಾ ಟಾಪ್, 2021 ರ ಬಾಕ್ಸ್ ಆಫೀಸ್ ಕಿಂಗ್ ಯಾರು ಗೊತ್ತೇ?? ಅತಿ ಹೆಚ್ಚು ದುಡ್ಡು ಬಾಚಿರುವ ಟಾಪ್ 10 ಚಿತ್ರಗಳು ಯಾವ್ಯಾವು ಗೊತ್ತೇ??

ನಮಸ್ಕಾರ ಸ್ನೇಹಿತರೇ 2021 ಈಗಾಗಲೆ ಮುಕ್ತಾಯಗೊಂಡಿದೆ. ಈ ವರ್ಷ ಎನ್ನುವುದು ಕನ್ನಡ ಚಿತ್ರರಂಗದ ಪಾಲಿಗೆ ಸಾಕಷ್ಟು ಏಳುಬೀಳುಗಳನ್ನು ತಂದಿತ್ತು. ಆದರೂ ಕೂಡ ಕನ್ನಡಚಿತ್ರರಂಗ ಈಗಾಗಲೇ ಈ ವರ್ಷವನ್ನು ಯಶಸ್ವಿಯಾಗಿ ಮುಗಿಸಿದೆ. ಇಂದಿನ ಲೇಖನಿಯಲ್ಲಿ ನಾವು 2021 ವರ್ಷದ ಅತ್ಯಂತ ಹೆಚ್ಚು ಬಾಕ್ಸಾಫೀಸ್ ಕಲೆಕ್ಷನ್ ಮಾಡಿದ ಚಿತ್ರಗಳು ಕುರಿತಂತೆ ನಿಮಗೆ ಹೇಳಲು ಹೊರಟಿದ್ದೇವೆ. ಹಾಗಿದ್ದರೆ ಈ ಲಿಸ್ಟಿನಲ್ಲಿ ಟಾಪ್10 ಸ್ಥಾನಗಳಲ್ಲಿ ಯಾರಿದ್ದಾರೆ ಎಂಬುದನ್ನು ತಿಳಿಯೋಣ ಬನ್ನಿ.

10 ನೇ ಸ್ಥಾನದಲ್ಲಿ ಡಾಲಿ ಧನಂಜಯ್ ರೆಬಾ ಮೋನಿಕ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ರತ್ನನ್ ಪ್ರಪಂಚ ಚಿತ್ರ ಕಾಣಸಿಗುತ್ತದೆ. ರೋಹಿತ್ ಪದಕಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ನೇರವಾಗಿ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು ಆದರೂ ಕೂಡ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. 9ನೇ ಸ್ಥಾನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಸಖತ್ ಚಿತ್ರ ಇದೆ. ಇದು ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು.

ಎಂಟನೇ ಸ್ಥಾನದಲ್ಲಿ ಗರುಡ ಗಮನ ವೃಷಭ ವಾಹನ ಚಿತ್ರ ಕಂಡುಬರುತ್ತದೆ. ರಾಜ್ ಬಿ ಶೆಟ್ಟಿ ಹಾಗೂ ಶೆಟ್ಟಿ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಈ ಚಿತ್ರ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡು ಬಾಕ್ಸಾಫೀಸಲ್ಲಿ 35 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಏಳನೇ ಸ್ಥಾನದಲ್ಲಿ ಉಮಾಪತಿ ಶ್ರೀನಿವಾಸಗೌಡ ನಿರ್ಮಾಣದ ರೋರಿಂಗ್ ಸ್ಟಾರ್ ಶ್ರೀ ಮುರಳಿ ಹಾಗೂ ಆಶಿಕ ರಂಗನಾಥ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ ಮದಗಜ ಚಿತ್ರ ಕಂಡುಬರುತ್ತದೆ. ಇದು ಬಾಕ್ಸ್ ಆಫೀಸ್ ನಲ್ಲಿ 38 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.

6ನೇ ಸ್ಥಾನದಲ್ಲಿ ದುನಿಯಾ ವಿಜಯ್ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಾಯಕ ನಟನಾಗಿ ನಟಿಸಿರುವ ಸಲಗ ಚಿತ್ರ ಕಂಡುಬರುತ್ತದೆ. ಈ ಚಿತ್ರದಲ್ಲಿ ಸಂಜನಾ ಆನಂದ್ ಹಾಗೂ ಡಾಲಿ ಧನಂಜಯ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಲಗ ಚಿತ್ರ ಬಾಕ್ಸಾಫೀಸ್ ನಲ್ಲಿ 45 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. 5ನೇ ಸ್ಥಾನದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಕೊನೆಯ ಚಿತ್ರವಾಗಿರುವ ಯುವರತ್ನ ಕಂಡುಬರುತ್ತದೆ. ಎರಡು ವಾರ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಂಡ ನಂತರ ದಾಖಲೆಯ ಬೆಲೆಗೆ ಅಮೆಜಾನ್ ಪ್ರೈಮ್ ಗೆ ಮಾರಾಟವಾಗಿತ್ತು. ಒಟ್ಟಾರೆಯಾಗಿ ಯುವರತ್ನ ಚಿತ್ರ ಬರೋಬ್ಬರಿ 55 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

ನಾಲ್ಕನೇ ಸ್ಥಾನದಲ್ಲಿ ಕರುನಾಡ ಚಕ್ರವರ್ತಿ ಶಿವಣ್ಣ ನಟನೆಯ ಭಜರಂಗಿ-2 ಚಿತ್ರ ಕಂಡುಬರುತ್ತದೆ. ಕಾಲ್ಪನಿಕ ಕಥೆಯ ರೀತಿಯಲ್ಲಿ ಮೂಡಿಬಂದಿರುವ ಈ ಚಿತ್ರ ಪ್ರೇಕ್ಷಕರ ಮನರಂಜಿಸುವಲ್ಲಿ ದೊಡ್ಡ ಮಟ್ಟದ ಯಶಸ್ಸನ್ನು ಕಂಡು 60 ಕೋಟಿ ಕಲೆಕ್ಷನ್ ಮಾಡಿತ್ತು. ಮೂರನೇ ಸ್ಥಾನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಪೊಗರು ಚಿತ್ರ ಕಂಡುಬರುತ್ತದೆ. ನಂದಕಿಶೋರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ನ್ಯಾಷನಲ್ ಕ್ರಷ್ ರಶ್ಮಿಕ ಮಂದಣ್ಣ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ ಕೂಡ ಬಾಕ್ಸಾಫೀಸ್ ನಲ್ಲಿ 65 ಕೋಟಿ ಕಲೆಕ್ಷನ್ ಮಾಡಿತ್ತು.

ಎರಡನೇ ಸ್ಥಾನದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ3 ಚಿತ್ರ ಕಂಡುಬರುತ್ತದೆ. ಸಾಕಷ್ಟು ನಿರೀಕ್ಷೆಗಳೊಂದಿಗೆ ತಡವಾಗಿ ಚಿತ್ರಮಂದಿರಗಳಲ್ಲಿ ತೆರೆಕಂಡರೂ ಕೂಡ ಬರೋಬ್ಬರಿ 75 ಕೋಟಿಗೂ ಅಧಿಕ ಬಾಕ್ಸಾಫೀಸ್ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಮೊದಲನೇ ಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಚಿತ್ರ ಕಂಡುಬರುತ್ತದೆ. ಡಿ ಬಾಸ್ ರವರ ದ್ವಿಪಾತ್ರದಲ್ಲಿ ಮೂಡಿ ಬಂದಿರುವ ರಾಬರ್ಟ್ ಚಿತ್ರ 100 ಕೋಟಿಗೂ ಅಧಿಕ ಬಾಕ್ಸಾಫೀಸ್ ಕಲೆಕ್ಷನ್ ಗಳಿಸುವ ಮೂಲಕ 2021 ರ ಅತ್ಯಧಿಕ ಬಾಕ್ಸಾಫೀಸ್ ಕಲೆಕ್ಷನ್ ಮಾಡಿರುವ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇವಿಷ್ಟರಲ್ಲಿ ನಿಮ್ಮ ನೆಚ್ಚಿನ ಚಿತ್ರ ಯಾವುದು ಎಂಬುದನ್ನು ತಪ್ಪದೆ ಕಾಮೆಂಟ್ ಬಾಕ್ಸ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.