ಕಡಿಮೆ ವಿದ್ಯಾಭ್ಯಾಸ ಹೊಂದಿದ್ದರೂ ಕೂಡ ಸರ್ಕಾರೀ ಉದ್ಯೋಗ ಪಡೆಯುವ ಸುವರ್ಣಾವಕಾಶ, ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ??

ನಮಸ್ಕಾರ ಸ್ನೇಹಿತರೇ, ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಕ್ಕೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಡಿಪ್ಲೋಮಾ ಮುಗಿಸಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆಬ್ರುವರಿ ಒಂದರಿಂದ ಆರಂಭವಾಗಿದೆ. ಖಾಲಿ ಇರುವ ಹುದ್ದೆ ವಯೋಮಿತಿ ವೇತನ ಇವುಗಳ ಬಗ್ಗೆ ಇಲ್ಲಿದೆ ಸೂಕ್ತವಾದ ಮಾಹಿತಿ.

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪಲ್ಸ್​ ಟೆಕ್ನಾಲಜಿ ಏಜೆಂಟ್ ಹುದ್ದೆ ಖಾಲಿ ಇದ್ದು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯ ಆಯ್ಕೆಗಾಗಿ ಫೆಬ್ರುವರಿ 11 ರಂದು ಬೆಳಿಗ್ಗೆ ವಿಶ್ವವಿದ್ಯಾಲಯದಲ್ಲಿ 10.30 ರಿಂದ ನೇರ ಸಂದರ್ಶನ ನಡೆಸಲಾಗುತ್ತದೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರುವ ದಾಖಲೆ ಹೊಂದಿರಬೇಕು.

ಅಭ್ಯರ್ಥಿಯ ವಯಸ್ಸು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ನಿಯಮಗಳ ಪ್ರಕಾರ ಇರಬೇಕು. ಮತ್ತು ಪಲ್ಸ್​ ಟೆಕ್ನಾಲಜಿ ಏಜೆಂಟ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 10,000 ರೂ. ಸಂಬಳ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿಯೆ ಉದ್ಯೋಗ ನೀಡಲಾಗುತ್ತದೆ. ಆಸಕ್ತರು ಅರ್ಜಿ ಸಲ್ಲಿಸಿ ಸಂದರ್ಶನಕ್ಕೆ ಹಾಜರಾಗಬಹುದು.